ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರೀತಿ ನಿರಾಕರಣೆ: ಯುವಕ ಆತ್ಮಹತ್ಯೆ

Published 21 ಫೆಬ್ರುವರಿ 2024, 15:39 IST
Last Updated 21 ಫೆಬ್ರುವರಿ 2024, 15:39 IST
ಅಕ್ಷರ ಗಾತ್ರ

ಚನ್ನಪಟ್ಟಣ: ಪ್ರೀತಿಸಿದ ಹುಡುಗಿ ತನ್ನನ್ನು ನಿರಾಕರಿಸಿದಳು ಎಂದು ಮನನೊಂದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಹಾರೋಕೊಪ್ಪ ಗ್ರಾಮದಲ್ಲಿ ಬುಧವಾರ ನಡೆದಿದೆ.

ಹಾರೋಕೊಪ್ಪ ಗ್ರಾಮದ ಅರುಣ್ ಕುಮಾರ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಗ್ರಾಮದ ರಾಜಶೇಖರ್ ಎಂಬುವರ ಮಗ.

‘ವೆಲ್ಡಿಂಗ್ ಕೆಲಸ ಮಾಡುತ್ತಿದ್ದ  ಅರುಣ್ ಕುಮಾರ್, ತನ್ನದೇ ಸಮುದಾಯದ ಚನ್ನಪಟ್ಟಣದ ಯುವತಿಯನ್ನು ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದ. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದ ವಿಷಯ ಯುವತಿ ಮನೆಯವರಿಗೆ ತಿಳಿದು ಆಕೆಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದರಿಂದ ಯುವತಿ ಈತನಿಂದ ದೂರವಾಗಿದ್ದಳು. ಯುವತಿ ತನ್ನ ಪ್ರೀತಿಯನ್ನು ನಿರಾಕರಿಸಿದ ಕಾರಣ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ನನ್ನ ಮಗ ಆತ್ಮಹತ್ಯೆ ಮಾಡಿಕೊಳ್ಳಲು ಯುವತಿಯ ಪೋಷಕರು ಕಾರಣ’ ಎಂದು ಯುವಕನ ತಂದೆ ತಾಲ್ಲೂಕಿನ ಅಕ್ಕೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT