ರಾಮನಗರ: ಇಂಧನ ದರದ ನಿರಂತರ ಏರಿಕೆ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷೆ ರದ್ದು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕಾಲೇಜು ವಿದ್ಯಾರ್ಥಿಗಳು ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ನಗರದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.

ನಗರದ ಐಜೂರು ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಘೋಷಣೆಗಳನ್ನು ಕೂಗಿ ಆಕ್ರೋಶ ಹೊರ ಹಾಕಿದರು. ಬೆಲೆ ಏರಿಕೆ ನಿಯಂತ್ರಣ ಮಾಡಲು ಅಸಮರ್ಥರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಾಜೀನಾಮೆ ನೀಡಬೇಕು. ಕೂಡಲೇ ಇಂಧನ ದರ ಇಳಿಸಬೇಕು ಎಂದು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸಿ.ವಿ. ಚಂದ್ರಸಾಗರ್, ‘ಅಮೆರಿಕ ಮತ್ತು ಇರಾನ್ ದೇಶಗಳ ಯುದ್ದದ ನೆಪಹೇಳಿ ಕೇಂದ್ರ ಸರ್ಕಾರ ನಿತ್ಯ ಪೆಟ್ರೋಲ್, ಡೀಸೆಲ್, ಸಿಎನ್ಜಿ, ಅಡುಗೆ ಅನಿಲ ದರ ಏರಿಕೆ ಮಾಡುವ ಮೂಲಕ ದೇಶದ ಮಧ್ಯಮ ವರ್ಗ ಮತ್ತು ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಅತ್ಯಗತ್ಯ ವಸ್ತುಗಳ ದರದಲ್ಲಿ ಸ್ಥಿರತೆ ಕಾಯ್ದುಕೊಳ್ಳುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಬೇರೆ ದೇಶಗಳು ಕನಿಷ್ಟ ಮೂರು ತಿಂಗಳುಗಳಿಗೆ ಸಾಕಾಗುವಷ್ಟು ಇಂಧನ ಮತ್ತು ಅನಿಲ ದಾಸ್ತಾನು ಇರಿಸಿಕೊಂಡಿವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸ್ವಾರ್ಥ ರಾಜಕಾರಣ ಮಾಡುತ್ತಾ, ರಾಜ್ಯಗಳ ಚುನಾವಣೆಗಳ ಕಡೆಗೆ ಗಮನ ಕೊಟ್ಟು ದೇಶದ ನಾಗರಿಕರನ್ನು ಬೆಲೆ ಏರಿಕೆಯ ಕೂಪಕ್ಕೆ ತಳ್ಳಿದೆ’ ಎಂದರು.

ಪ್ರಧಾನ ಕಾರ್ಯದರ್ಶಿ ಎಸ್. ವೆಂಕಟೇಶ್ ಮಾತನಾಡಿ, ‘ಚುನಾವಣೆಗೆ ಮುನ್ನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಏರಿಕೆ ಮಾಡುವುದಿಲ್ಲ ಎಂದು ಸುಳ್ಳು ಹೇಳಿದ್ದ ಸರ್ಕಾರ, ಈಗ ಪ್ರತಿದಿನ ಬೆಲೆ ಏರಿಕೆ ಮಾಡುತ್ತಿದೆ. ಐದು ದಿನಗಳಲ್ಲಿ ಇಂಧನ ದರ ₹10 ಏರಿಕೆಯಾಗಿದೆ. ಇದು ಜನಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಇಂಧನ ಬೆಲೆ ಏರಿಸಿದರೆ ಎಲ್ಲ ಬೆಲೆಗಳೂ ಏರಿಕೆಯಾಗುತ್ತವೆ ಎನ್ನುವ ಸಾಮಾನ್ಯ ಜ್ಞಾನವಿಲ್ಲದ ಕೇಂದ್ರ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ’ ಎಂದು ಆಕ್ರೋಶ ಹೊರಹಾಕಿದರು.

‘ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಿಂದಾಗಿ ಪರೀಕ್ಷೆ ರದ್ದಾಗಿರುವುದು ಕೇಂದ್ರ ಸರ್ಕಾರದ ಅಸಮರ್ಥತೆಗೆ ಸಾಕ್ಷಿಯಾಗಿದೆ. ಸರ್ಕಾರದ ನಿರ್ಧಾರದಿಂದಾಗಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೀಟ್ ಅಕ್ರಮ ತಡೆಗಟ್ಟಲು ಸಾಧ್ಯವಾಗುವುದಿಲ್ಲ ಎಂದ ಮೇಲೆ, ಅದರ ಹೊಣೆಯನ್ನು ರಾಜ್ಯಗಳಿಗೆ ವಹಿಸಬೇಕು. ಅದು ಬಿಟ್ಟು ವಿದ್ಯಾರ್ಥಿಗಳ ಬದುಕಿನ ಜೊತೆ ಚೆಲ್ಲಾಟವಾಡುವುದನ್ನು ನಿಲ್ಲಿಸಬೇಕು’ ಎಂದು ಆಗ್ರಹಿಸಿದರು.

ಯುವ ಕಾಂಗ್ರೆಸ್ನ ಪದಾಧಿಕಾರಿಗಳಾದ ಎಂ.ಎಸ್. ಚೇತನ್, ಭೂಷಣ್ ಜಯರಾಮ್, ಸುಜಯ್, ದೀಪು ಗೌಡ, ವಿನಯ್ ಗೌಡ, ಮುಶೀರ್ ಎಂ., ರಾಮು, ಮುಖಂಡರಾದ ಅನಿಲ್ ಜೋಗಿಂದರ್, ಶರತ್, ಶಿವಕುಮಾರ್, ಸಯಾನ್, ವಿನಯ್, ಲೋಕೇಶ್, ದುರ್ಗಾ ಪ್ರಸಾದ್ ಹಾಗೂ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-14-501060667

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.