ಶುಕ್ರವಾರ, ಸೆಪ್ಟೆಂಬರ್ 25, 2020
28 °C

ಕೋಡಿಹಳ್ಳಿ ಗ್ರಾ.ಪಂ.ಗೆ ಅಧ್ಯಕ್ಷರಾಗಿ ರಮೇಶ್‌ ಅವಿರೋಧ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಡಿಹಳ್ಳಿ (ಕನಕಪುರ): ಕೋಡಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್‌ ಬೆಂಬಲಿತ ರಮೇಶ್‌ ಅವಿರೋಧವಾಗಿ ಆಯ್ಕೆಯಾದರು.

ಹಿಂದಿನ ಅವಧಿಯ ಅಧ್ಯಕ್ಷರಾಗಿದ್ದ ನಂದೀಶ್‌ ನೀಡಿದ್ದ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಬುಧವಾರ ಚುನಾವಣೆ ನಡೆಯಿತು. ಉಪಖಜಾನೆ ಸಹಾಯಕ ನಿರ್ದೇಶಕ ಎಂ.ಎಸ್‌.ರಾಜರತ್ನ  ಚುನಾವಣೆ ನಡೆಸಿದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್‌.ಎಂ.ಕೃಷ್ಣಮೂರ್ತಿ, ಕಾರ್ಯದರ್ಶಿ ಮೋಹನ್‌ಕುಮಾರ್‌, ಕರವಸೂಲಿಗಾರ ಶಿವಶಂಕರ್‌ ಚುನಾವಣಾ ಸಹಾಯಕರಾಗಿ ಕಾರ್ಯ ನಿರ್ವಹಿಸಿದರು. ಪಂಚಾಯಿತಿ 18 ಸದಸ್ಯರು ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

ಬ್ಲಾಕ್‌ ಅಧ್ಯಕ್ಷ ಎಂ.ಡಿ.ವಿಜಯದೇವು, ಜಿಲ್ಲಾ ಪಂಚಾಯಿತಿ ಸದಸ್ಯರಾದ ಜಯರತ್ನ ರಾಜೇಂದ್ರ, ಬಿ.ಬಸಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯೆ ಅನ್ನಪೂರ್ಣ ಸೋಮಣ್ಣ, ಮಾಜಿ ಅಧ್ಯಕ್ಷ ಗೊಲ್ಲಳ್ಳಿ ಉಮೇಶ್‌, ಕೋಡಿಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮಲ್ಲೇಶ್‌, ಹೂಕುಂದ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಮೀರ್‌ ಅಹಮ್ಮದ್‌, ಕೋಡಿಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಆಶಾ ಚಿಂದಾರಿಗೌಡ, ಅಶೋಕ್‌, ವೆಂಕಟರಾಮೇಗೌಡ, ಉಪಾಧ್ಯಕ್ಷ ಲೋಕೇಶ್‌, ಮಾಜಿ ಉಪಾಧ್ಯಕ್ಷ ಪರಶಿವ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಶಿವಣ್ಣ ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.