ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಗೇಶ್ವರ್‌ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ರಾಮನಗರದ ಮೂಲ ಬಿಜೆಪಿ ನಾಯಕರು

Last Updated 29 ಮೇ 2021, 9:13 IST
ಅಕ್ಷರ ಗಾತ್ರ

ರಾಮನಗರ: ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಕುರಿತು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಹಿನ್ನೆಲೆಯಲ್ಲಿ ಜಿಲ್ಲೆಯ ಬಿಜೆಪಿ ಮುಖಂಡರು ಅವರೊಂದಿಗೆ ಅಂತರ ಕಾಯ್ದುಕೊಳ್ಳುವ ಪ್ರಯತ್ನ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಶುಕ್ರವಾರ ಚನ್ನಪಟ್ಟಣದಲ್ಲಿ ಯೋಗೇಶ್ವರ್ ಬೆಂಬಲಿಗರು ಸುದ್ದಿಗೋಷ್ಠಿ ನಡೆಸಿದರು. ಈ ಗೋಷ್ಠಿಗೆ ಪಕ್ಷದ ಜಿಲ್ಲಾ ಮತ್ತು ತಾಲ್ಲೂಕು ಘಟಕದ ಅಧ್ಯಕ್ಷರು ಗೈರಾಗಿದ್ದರು. ಯೋಗೇಶ್ವರ್‌ ಬೆಂಬಲಿಗ ಮುಖಂಡರು ಮಾತ್ರ ಪಾಲ್ಗೊಂಡಿದ್ದರು. ಈ ಮೂಲಕ, ರಾಜ್ಯ ಸರ್ಕಾರಕ್ಕೆ ಸಡ್ಡು ಹೊಡೆಯಲು ನಿಂತಿರುವ ಸಿಪಿವೈರಿಂದ ಮೂಲ ಬಿಜೆಪಿಗರು ದೂರ ನಿಲ್ಲುವ ಮೂಲಕ ಪಕ್ಷ ನಿಷ್ಠೆ ಪ್ರದರ್ಶನ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಕುರಿತು ಬಿಜೆಪಿ ರಾಮನಗರ ಜಿಲ್ಲಾ ಘಟಕದ ಅಧ್ಯಕ್ಷ ಹುಲುವಾಡಿ ದೇವರಾಜು ಪ್ರತಿಕ್ರಿಯೆ ನೀಡಿದ್ದು ‘ ಪೂರ್ವ ನಿರ್ಧಾರಿತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಳ್ಳಲಿಲ್ಲ. ಚನ್ನಪಟ್ಟಣ ತಾಲ್ಲೂಕು ಅಧ್ಯಕ್ಷರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದರಿಂದ ಅವರು ಪಾಲ್ಗೊಂಡಿಲ್ಲ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ’ ಎಂದು ಸ್ಪಷ್ಟನೆ ನೀಡಿದರು.

ಚೌಕಟ್ಟು ಮೀರಿ ಮಾತನಾಡಲ್ಲ: ‘ಮೂರು ಪಕ್ಷಗಳ ಸರ್ಕಾರ’ ಎಂಬ ಸಿ.ಪಿ. ಯೋಗೇಶ್ವರ್‌ ಹೇಳಿಕೆ ಕುರಿತು ಕೆಆರ್‌ಐಡಿಎಲ್ ಅಧ್ಯಕ್ಷ ಎಂ. ರುದ್ರೇಶ್‌ ರಾಮನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು ‘ಅವರೇಕೆ ಹೀಗೆ ಹೇಳುತ್ತಿದ್ದಾರೆಯೋ ನನಗೆ ಗೊತ್ತಿಲ್ಲ. ಅದರ ಬಗ್ಗೆ ಪ್ರತಿಕ್ರಿಯಿಸುವಷ್ಟೊ ದೊಡ್ಡವನು ನಾನಲ್ಲ’ ಎಂದು ಹೇಳಿದರು. ‘ನಾನು ಬಿಜೆಪಿ ಕಟ್ಟಾಳು, ಪಕ್ಷದ ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಚೌಕಟ್ಟು ಮೀರಿ ಮಾತನಾಡುವುದು ಇಷ್ಟವಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT