ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಕಪುರ | ಮಾರಕಾಸ್ತ್ರಗಳಿಂದ ಹಲ್ಲೆ: ದೂರು

Published 5 ಏಪ್ರಿಲ್ 2024, 5:10 IST
Last Updated 5 ಏಪ್ರಿಲ್ 2024, 5:10 IST
ಅಕ್ಷರ ಗಾತ್ರ

ಕನಕಪುರ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಮನಬಂದಂತೆ ಥಳಿಸಿರುವುದು ಸೀಗೆಕೋಟೆ ಅನುಜವಾಡಿದೊಡ್ಡಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.

ಕಿರಣ್ ಕುಮಾರ್ ನಾಯ್ಕ್ ಮತ್ತು ವೆಂಕಟೇಶ್ ನಾಯ್ಕ್ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡವರು. ಇದೇ ಗ್ರಾಮದ ಬಾಬೇಸ್ ನಾಯ್ಕ ಮತ್ತು ಶಿವುನಾಯ್ಕ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಆರೋಪಿಗಳು.

ಕರ್ನಾಟಕ ಬಂಜಾರ ಲಂಬಾಣಿ ಜನ ಸೇವಾ ಸಂಘದ ಅಧ್ಯಕ್ಷ ಎ.ಆರ್.ಹನುಮಂತ ನಾಯ್ಕ್ ಹಲ್ಲೆ ಮಾಡುತ್ತಿದ್ದವರನ್ನು ತಡೆದು, ಕಿರಣ್ ಕುಮಾರ್ ನಾಯ್ಕ್ ಮತ್ತು ವೆಂಕಟೇಶ್ ನಾಯ್ಕ್ ಅವರನ್ನು ಕನಕಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಆರೋಪಿಗಳು ಈ ಹಿಂದೆಯೂ ಹಲ್ಲೆ ನಡೆಸಿದ್ದು ಗ್ರಾಮಸ್ಥರ ಮಧ್ಯಸ್ಥಿಕೆಯಿಂದ ಮಾತುಕತೆ ಮೂಲಕ ದೂರು ನೀಡದೆ ಬಗೆಹರಿಸಿಕೊಳ್ಳಲಾಗಿತ್ತು ಎಂದು ಹಲ್ಲೆಗೆ ಒಳಗಾದವರು ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT