ಗುರುವಾರ, 18 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಮನಗರ: ಡಾ. ಅವಿನಾಶ್ ವರ್ಗಾವಣೆ– ಯಶವಂತ್ ನೂತನ ಜಿಲ್ಲಾಧಿಕಾರಿ

Published 6 ಜುಲೈ 2024, 16:14 IST
Last Updated 6 ಜುಲೈ 2024, 16:14 IST
ಅಕ್ಷರ ಗಾತ್ರ

ರಾಮನಗರ: ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರನ್ನು ಸರ್ಕಾರ ಶನಿವಾರ ವರ್ಗಾವಣೆ ಮಾಡಿದೆ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸ್ಮಾರ್ಟ್ ಆಡಳಿತ ಕೇಂದ್ರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯಶವಂತ್ ವಿ. ಗುರುಕರ್ ಅವರನ್ನು ನೇಮಿಸಿದೆ.

2022ರ ಜೂನ್‌ನಲ್ಲಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿ ಬಂದಿದ್ದ ಡಾ. ಅವಿನಾಶ್ ಅವರು, ಜಿಲ್ಲೆಯಲ್ಲಿ 2 ವರ್ಷ 2 ತಿಂಗಳು ಸೇವೆ ಸಲ್ಲಿಸಿದ್ದರು. ಈಗ ಅವರು‌ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಡಳಿತ ವಿಭಾಗದ ವಿಶೇಷ ಆಯುಕ್ತರಾಗಿ ನೇಮಕವಾಗಿದ್ದಾರೆ. 

ಎಂ.ಬಿ.ಎ ಪದವೀಧರರಾಗಿರುವ ಯಶವಂತ್ ಅವರು ಮೂಲತಃ ಬೆಂಗಳೂರಿನವರಾಗಿದ್ದು, 2010ನೇ ಬ್ಯಾಚಿನ ಐಎಎಸ್ ಅಧಿಕಾರಿಯಾಗಿದ್ದಾರೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿ ಮತ್ತು ಕಲಬುರಗಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿರುವ ಅವರು, ಕಳೆದ ಜೂನ್‌ನಲ್ಲಿ ಸ್ಮಾರ್ಟ್ ಆಡಳಿತದ ಕೇಂದ್ರದ ಸಿಇಒ ಆಗಿ ವರ್ಗಾವಣೆಯಾಗಿದ್ದರು. ಇದೀಗ, ರಾಮನಗರ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT