ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ವಿಚಾರಕ್ಕೆ ಗಲಾಟೆ: ಯುವಕನ ಕೊಲೆ

Published 5 ಜೂನ್ 2023, 8:02 IST
Last Updated 5 ಜೂನ್ 2023, 8:02 IST
ಅಕ್ಷರ ಗಾತ್ರ

ರಾಮನಗರ: ಜಿಲ್ಲೆಯ ಶೇಷಗಿರಿ ಟೋಲ್‌ನಲ್ಲಿ ಭಾನುವಾರ ರಾತ್ರಿ ಟೋಲ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬನ ಕೊಲೆಯಾಗಿದೆ. ತಾರವೆರೆಕೆರೆಯ ಸಿಕ್ಕೆಪಾಳ್ಯದ ಪವನ್ ನಾಯಕ್ (30) ಕೊಲೆಯಾದ ಯುವಕ.

ಬೆಂಗಳೂರು ಮೂಲದ ಯುವಕರ ಗುಂಪೊಂದು ಟೋಲ್ ಪಾವತಿಗೆ ಸಂಬಂಧಿಸಿದಂತೆ, ಪವನ್ ಅವರೊಂದಿಗೆ ಜಗಳವಾಡಿದೆ. ದೊಣ್ಣೆಯಿಂದ ತಲೆಗೆ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಬಿಡದಿ ಠಾಣೆ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT