ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಫಲಿತಾಂಶದಲ್ಲಿ ಮೊದಲನೇ ಸ್ಥಾನ ಗಳಿಸಿ’

Last Updated 6 ಆಗಸ್ಟ್ 2019, 13:11 IST
ಅಕ್ಷರ ಗಾತ್ರ

ಕುದೂರು (ಮಾಗಡಿ): ಶಿಕ್ಷಕರು ಬೋಧಿಸುವ ಪಠ್ಯ ವಿಷಯ ಆಲಿಸುವುದರ ಜತೆಗೆ ಶಿಸ್ತು ಮತ್ತು ಸಮಯಪಾಲನೆ ಅಳವಡಿಸಿಕೊಂಡು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಗಳಿಸಲು ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಸಮೃದ್ಧಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ಡಾ.ಡಿ.ಸಿ.ರಾಮಚಂದ್ರ ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಸಮೃದ್ಧಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಾಗೂ ಬೆಂಗಳೂರು ನಾಲೆಡ್ಜ್ ಇನ್ವೆನ್ಷನ್ ಪಬ್ಲಿಷರ್ಸ್ ಅಂಡ್ ಡಿಸ್ಟ್ರಿಬ್ಯೂಟರ್ಸ್ ಸಹಯೋಗದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಮಂಗಳವಾರ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ನಡೆದ ಪಠ್ಯಾಧಾರಿತ ಪುನ‌ಶ್ಚೇತನ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.

ಸಂಸ್ಥೆ ವತಿಯಿಂದ ಜಿಲ್ಲೆಯ 4 ತಾಲ್ಲೂಕುಗಳಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ತರಬೇತಿ ಕಾರ್ಯಾಗಾರ ಏರ್ಪಡಿಸಲಾಗುವುದು ಎಂದರು.

ಡಿಡಿಪಿಐ ಗಂಗಮಾರೇಗೌಡ ಮಾತನಾಡಿ, 2019–20ನೇ ಸಾಲಿನಲ್ಲಿ ನಡೆಯಲಿರುವ ಪರೀಕ್ಷೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ರಾಜ್ಯದಲ್ಲಿಯೇ ಫಲಿತಾಂಶದಲ್ಲಿ ಮೊದಲನೇ ಸ್ಥಾನ ಗಳಿಸಬೇಕು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದೇಶ್ವರ.ಎಸ್‌, ಮಾನವ ಸಂಪನ್ಮೂಲ ತರಬೇತುದಾರ ಅನಿಲ್‌ ಕುಮಾರ್‌ ಜೋಷಿ, ಸುನಿಲ್‌ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT