ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಗಡಿ | ಬಾಲಕಿ ಮೇಲೆ ಅತ್ಯಾಚಾರ: ವ್ಯಕ್ತಿ ಬಂಧನ

Published 23 ಫೆಬ್ರುವರಿ 2024, 6:18 IST
Last Updated 23 ಫೆಬ್ರುವರಿ 2024, 6:18 IST
ಅಕ್ಷರ ಗಾತ್ರ

ಮಾಗಡಿ: ತಾಲ್ಲೂಕಿನ ಹದಿಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಆಕೆ ಗರ್ಭಿಣಿಯಾಗುವಂತೆ ಮಾಡಿದ ಆರೋಪದ ಮೇಲೆ 56 ವರ್ಷದ ಬೆಟ್ಟಸ್ವಾಮಯ್ಯ ಎಂಬಾತನನ್ನು ಮಾಗಡಿ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಅಡುಗೆ ಕೆಲಸ ಮಾಡುತ್ತಿದ್ದ ಆರೋಪಿ, ಏಳನೇ ತರಗತಿ ಓದುತ್ತಿದ್ದ ಬಾಲಕಿ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಇದರಿಂದಾಗಿ, ಬಾಲಕಿ ಆರೋಗ್ಯದಲ್ಲಿ ಇತ್ತೀಚೆಗೆ ಏರುಪೇರಾಗಿತ್ತು. ಪೋಷಕರು ಮಾಗಡಿ ಸರ್ಕಾರಿ ಆಸ್ಪತ್ರೆಗೆ ಬಾಲಕಿಯನ್ನು ಕರೆದುಕೊಂಡು ಹೋಗಿ ತೋರಿಸಿದಾಗ ಆಕೆ ಗರ್ಭಿಣಿಯಾಗಿರುವುದು ಗೊತ್ತಾಗಿದೆ. ಈ ಕುರಿತು ವಿಚಾರಿಸಿದಾಗ ಬಾಲಕಿ ಬೆಟ್ಟಸ್ವಾಮಯ್ಯನ ಹೀನ ಕೃತ್ಯದ ಬಗ್ಗೆ ಹೇಳಿದ್ದಾಳೆ.

ಬಾಲಕಿ ಮತ್ತು ಆರೋಪಿ ಒಂದೇ ಗ್ರಾಮದವರಾಗಿದ್ದು, ಸಂಬಂಧಿಗಳಾಗಿದ್ದಾರೆ. ಸದ್ಯ ಬಾಲಕಿಗೆ ಚಿಕಿತ್ಸೆ ನೀಡಿ ಶಿಶು ಮಂದಿರಕ್ಕೆ ಕಳುಹಿಸಿ ಕೊಡಲಾಗಿದೆ. ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT