ರಾಮನಗರ: ದಲಿತ ಸಮುದಾಯಕ್ಕೆ ಸೇರಿದ ಗುತ್ತಿಗೆದಾರನಿಗೆ ಜಾತಿನಿಂದನೆ ಹಾಗೂ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಜೈಲು ಸೇರಿರುವ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ವಿರುದ್ಧ ಮಹಿಳೆಯೊಯೊಬ್ಬರ ಮೇಲೆ ಅತ್ಯಾಚಾರ ಎಸಗಿ, ಹನಿಟ್ರ್ಯಾಪ್‌ಗೆ ಬಳಸಿಕೊಂಡಿರುವ ಆರೋಪ ಕೇಳಿ ಬಂದಿದೆ.

ಸಮಾಜ ಸೇವಕಿಯಾಗಿ ಗುರುತಿಸಿಕೊಂಡು ಬಿಜೆಪಿಯಲ್ಲೂ ಸಕ್ರಿಯವಾಗಿರುವ ರಾಜರಾಜೇಶ್ವರಿ ನಗರದ ಸುಮಾರು 40 ವರ್ಷದ ಮಹಿಳೆ ಬುಧವಾರ ದೂರು ಕೊಟ್ಟಿದ್ದಾರೆ. ಆ ಮೇರೆಗೆ ರಾತ್ರಿ ಮುನಿರತ್ನ, ಆತನ ಗನ್‌ಮ್ಯಾನ್ ವಿಜಯಕುಮಾರ್, ಸುಧಾಕರ, ಕಿರಣ್ ಕುಮಾಋ್, ಲೋಹಿತ್ ಗೌಡ, ಮಂಜುನಾಥ ಹಾಗೂ ಲೋಕಿ ಸೇರಿ 7 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

ದೂರು ನೀಡುವ ಸಲುವಾಗಿ ಮಹಿಳೆ ಬುಧವಾರ ಮಧ್ಯಾಹ್ನ ರಾಮನಗರದಲ್ಲಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಬಂದಿದ್ದರು. ಮಹಿಳೆಯನ್ನು ವಿಚಾರಿಸಿ ಮಾಹಿತಿ ಪಡೆದ ಪೊಲೀಸರು, ಕೃತ್ಯ ನಡೆದ ಸ್ಥಳ ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವುದರಿಂದ ಅಲ್ಲಿಗೇ ಹೋಗಿ ದೂರು ಕೊಡುವಂತೆ ಸೂಚಿಸಿದ್ದಾರೆ.

ಅದರಂತೆ, ಕಗ್ಗಲಿಪುರ ಠಾಣೆಗೆ ಬಂದ ಮಹಿಳೆ ತನ್ನ ಮೇಲೆ 2020ರಿಂದ 2022ರವರೆಗೆ ಅತ್ಯಾಚಾರ ನಡೆಸಿ, ಹನಿಟ್ರ್ಯಾಪ್‌ಗೆ ಬಳಸಿ
ಕೊಂಡಿರುವ ಕುರಿತು ದೂರು ಕೊಟ್ಟಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ದೂರು ಪರಿಶೀಲಿಸಿದ ಠಾಣೆಯ ಅಧಿಕಾರಿಗಳು ನಂತರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದೂರಿನಲ್ಲೇನಿದೆ?: ಕೋವಿಡ್ ಸಂದರ್ಭದಲ್ಲಿ ನನ್ನ ಸೇವಾ ಕಾರ್ಯ ಗುರುತಿಸಿ ಕರೆ ಮಾಡಿದ್ದ ಮುನಿರತ್ನ, ‘ನಮಸ್ತೆ ಲೀಡರ್ ನಾನು ನಿಮ್ಮ ಭಾಗದ ಶಾಸಕ. ನಿಮ್ಮ ಬಗ್ಗೆ ಕೇಳಿದ್ದೀನಿ. ನನ್ನನ್ನು ಬಂದು ಭೇಟಿ ಮಾಡಿ’ ಎಂದಿದ್ದ. ಅದರಂತೆ, ಭೇಟಿ ಮಾಡಿದ ಬಳಿಕ ಇಬ್ಬರ ನಡುವೆ ಆತ್ಮೀಯತೆ ಬೆಳೆದಿತ್ತು. ಆಗಾಗ ವಿಡಿಯೊ ಕಾಲ್ ಮಾಡಿ ಮಾತನಾಡುತ್ತಿದ್ದರು. ನಗ್ನವಾಗಿ ಕರೆ ಮಾಡುವಂತೆ ಒತ್ತಾಯಿಸಿದಾಗ, ನಾನು ನಿರಾಕರಿಸಿದ್ದೆ.

ಒಮ್ಮೆ ಕರೆ ಮಾಡಿ, ನಿಮ್ಮಿಂದ ಒಂದು ಸಹಾಯವಾಗಬೇಕು ಎಂದು ಕೇಳಿ, ಸ್ಥಳವೊಂದಕ್ಕೆ ಬರಲು ಸೂಚಿಸಿದ್ದರು. ಅದರಂತೆ, ನಾನು ಹೋದಾಗ ‘ನಿನ್ನ ನೋಡಿದರೆ ಮೈ ಜುಮ್ ಎನ್ನುತ್ತದೆ’ ಎಂದು ಮಾತನಾಡಿ ತಬ್ಬಿಕೊಳ್ಳಲು ಮುಂದಾದ. ನಾನು ಆಕ್ಷೇಪಿಸಿದಾಗ, ‘ರಾಜಕೀಯಕ್ಕೆ ಬರಬೇಕಾದರೆ ಇವೆಲ್ಲಾ ಕಾಮನ್’ ಎಂದು ಹೇಳಿ ಮುಂದುವರಿದ.

ನಾನು ಕಿರುಚಿಕೊಳ್ಳುತ್ತೇನೆ ಎಂದು ಹೇಳಿದಾಗ, ‘ನಾನು ಶಾಸಕ. ಅಪಾರ ಜನಬೆಂಬಲವಿದೆ. ನಿನ್ನ ವಿರುದ್ದವೆ ಕಂಪ್ಲೆಂಟ್ ಮಾಡುತ್ತೇನೆ. ಸುಮ್ಮನಿದ್ದರೆ ಸರಿ’ ಎಂದು ಅತ್ಯಾಚಾರ ಎಸಗಿದ್ದಾನೆ. ಇಲ್ಲಿ ನಡೆದ ವಿಷಯವನ್ನು ಯಾರಿಗೂ ತಿಳಿಸಬೇಡ. ಈ ಕೊಠಡಿಯಲ್ಲಿ ಕ್ಯಾಮೆರಾ ಅಳವಡಿಸಿದ್ದು, ಎಲ್ಲವೂ ರೆಕಾರ್ಡ್ ಆಗಿದೆ. ನಿನ್ನ ವಿಡಿಯೊ ಎಡಿಟ್ ಮಾಡಿ ಹಂಚುತ್ತೇನೆ’ ಎಂದು ಹೆದರಿಸಿದ್ದಾನೆ. ಚಿತ್ರೀಕರಿಸಿ ಟಿ.ವಿ.ಯಲ್ಲಿ ಹಾಕಿ ನನಗೆ ತೋರಿಸಿದ್ದಾನೆ.

ವಿಡಿಯೊ ಇಟ್ಟುಕೊಂಡು ಹಲವು ಬಾರಿ ಅತ್ಯಾಚಾರ ಎಸಗಿದ್ದು, ‘ನಾನು ಹೇಳಿದಂತೆ ಕೇಳಬೇಕು. ಇಲ್ಲದಿದ್ದರೆ ನಿನ್ನ ಗಂಡ ಮತ್ತು ಮಕ್ಕಳಿಗೆ ವಿಡಿಯೊ ತೋರಿಸುತ್ತೇನೆ’ ಎಂದು ಬೆದರಿಕೆ ಹಾಕಿದ್ದಾನೆ. ನಂತರ, ಆತನಿಗೆ ಪರಿಚಿತವಿರುವ ಮತ್ತೊಬ್ಬ ಮಹಿಳೆ ಜೊತೆ ಸೇರಿ ಆತ ಹೇಳಿದವರನ್ನು ಹನಿಟ್ರ್ಯಾಪ್ ಮಾಡಿಸಿದ್ದಾನೆ. ಮರ್ಯಾದೆ ಹಾಗೂ ಪ್ರಾಣಕ್ಕೆ ಅಂಜಿ ಆತ ಹೇಳಿದಂತೆ ಕೇಳಿದ್ದೇನೆ. ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.