ಗುರುವಾರ , ನವೆಂಬರ್ 21, 2019
21 °C

ಅತ್ಯಾಚಾರ ಆರೋಪ: ವ್ಯಕ್ತಿ ಬಂಧನ

Published:
Updated:

ಚನ್ನಪಟ್ಟಣ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಣ ಮಾಡಿ, ಅತ್ಯಾಚಾರ ಮಾಡಿರುವ ಆರೋಪದ ಮೇಲೆ ಗ್ರಾಮಾಂತರ ಪೊಲೀಸರು ಸೋಮವಾರ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

ರಂಜಿತ್ (25) ಬಂಧಿತ ಆರೋಪಿ. ಈತ ಪಟ್ಟಣದ ಆನಂದಪುರ ನಿವಾಸಿ. ಈತ ಬಾಲಕಿಯನ್ನು ಅಪಹರಣ ಮಾಡಿ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿಯ ಪೋಷಕರು ನೀಡಿರುವ ದೂರಿನ ಅನ್ವಯ ಬಂಧಿಸಲಾಗಿದೆ.

ಬಾಲಕಿಯನ್ನು ಬೆಂಗಳೂರಿನ ಮನೆಯೊಂದರಲ್ಲಿ ಕೂಡಿಹಾಕಿರುವ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಆತನನ್ನು ಬಂಧಿಸಿದರು. ಬಳಿಕ ಬಾಲಕಿಯನ್ನು ಪೋಷಕರಿಗೆ ಒಪ್ಪಿಸಿದ್ದಾರೆ. ಪೈಂಟರ್ ವೃತ್ತಿ ಮಾಡುವ ಬಂಧಿತ ಆರೋಪಿ ರಂಜಿತ್ ನನ್ನು ಪೋಕ್ಸೊ ಕಾಯ್ದೆಯಡಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)