ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಎಸ್‌ಎಸ್ ವಿರೋಧಿ ಹೇಳಿಕೆ: ಬಹಿರಂಗ ಚರ್ಚೆಗೆ ಸಿದ್ಧ ಎಂದ ಕುಮಾರಸ್ವಾಮಿ

Last Updated 8 ಅಕ್ಟೋಬರ್ 2021, 8:50 IST
ಅಕ್ಷರ ಗಾತ್ರ

ರಾಮನಗರ: ಆರ್‌ಎಸ್‌ಎಸ್ ಕುರಿತು ನೀಡಿರುವ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ.‌ ಈ ಬಗ್ಗೆ ಯಾವುದೇ ಬಹಿರಂಗ ಚರ್ಚೆಗೆ ಸಿದ್ಧನಿದ್ದೇನೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.‌ ಕುಮಾರಸ್ವಾಮಿ ಹೇಳಿದರು.

ಚನ್ನಪಟ್ಟಣದಲ್ಲಿ ಶುಕ್ರವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು 'ಬಿಜೆಪಿಯು ಆರ್ ಎಸ್ ಜೊತೆ ಸೇರಿಕೊಂಡು ಕಾಶ್ಮೀರವನ್ನು ಹಾಳು ಮಾಡುತ್ತಿದೆ' ಎಂದು ದೂರಿದರು. ಕೆಲ ದಿನಗಳ ಹಿಂದಷ್ಟೇ ಕಾಶ್ಮೀರದಲ್ಲಿ ಉಗ್ರರು ಶಾಲೆಗೆ ನುಗ್ಗಿ ಶಿಕ್ಷಕರನ್ನು ಕೊಂದು ಹಾಕಿದ್ದಾರೆ. ಈ ವರ್ಷ ಗಡಿಯಲ್ಲಿ ಹೆಚ್ಚು‌ ಸೈನಿಕರ ಸಾವಾಗಿದೆ‌. ಇದೇನಾ ಆರ್‌ಎಸ್‌ಎಸ್ ನಿಮಗೆ ಸರ್ಕಾರ ನಡೆಸುವುದು ಹೇಗೆ ಎಂದು ಹೇಳಿಕೊಟ್ಟಿರುವ ಪಾಠ' ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಬೆಂಬಲಿಸಿ: ರಾಜ್ಯದಲ್ಲಿ ಜಾತ್ಯತೀತತೆ ಉಳಿಸಲು ಅಲ್ಪಸಂಖ್ಯಾತರು ಜೆಡಿಎಸ್ ಇಲ್ಲವೇ ಕಾಂಗ್ರೆಸ್ ಬೆಂಬಲಿಸಿ ಎಂದು ನಾನು ಮುಕ್ತವಾಗಿ ಹೇಳಿದ್ದೇನೆ. ಎಲ್ಲಿ ಬಿಜೆಪಿಗಿಂತ ಕಾಂಗ್ರೆಸ್ ಮುಂದೆ ಇದೆಯೋ ಅಲ್ಲಿ‌ ಕಾಂಗ್ರೆಸ್ ಬೆಂಬಲಿಸಿ. ಎಲ್ಲಿ ಬಿಜೆಪಿಗಿಂತ ಜೆಡಿಎಸ್ ಮುಂದೆ ಇದೆಯೋ ಅಲ್ಲಿ ಜೆಡಿಎಸ್ ಬೆಂಬಲಿಸಿ ಎಂದು ಕೋರಿದ್ದೇನೆ. ಸಿದ್ದರಾಮಯ್ಯ ಥರ ಕೀಳುಮಟ್ಟದ ರಾಜಕಾರಣ ಮಾಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ಸಿಂದಗಿ ಉಪಚುನಾವಣೆಯಲ್ಲಿ ಜೆಡಿಎಸ್ ಗೆಲ್ಲುವ ಸಾಧ್ಯತೆ ಇದೆ. ಹಾನಗಲ್‌ನಲ್ಲೂ ಪೈಪೋಟಿ ನೀಡಲಿದ್ದೇವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT