ಗುರುವಾರ , ಸೆಪ್ಟೆಂಬರ್ 23, 2021
26 °C

ಅಕ್ರಮವಾಗಿ ಮಗು ಪಾಲನೆ: ದೂರು ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಕಾನೂನಾತ್ಮಕವಾಗಿ ದತ್ತು ಪಡೆಯದೇ ಮಗುವಿನ ಪಾಲನೆ ಮಾಡುತ್ತಿದ್ದವರ ವಿರುದ್ಧ ಚನ್ನಪಟ್ಟಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಚನ್ನಪಟ್ಟಣ ತಾಲ್ಲೂಕಿನ ಅಪ್ಪಗರೆ ಗ್ರಾಮದ ಮಹಿಳೆಯೊಬ್ಬರು 12 ದಿನದ ಹೆಣ್ಣು ಮಗುವನ್ನು ತಮ್ಮ ಮನೆಯಲ್ಲಿ ಸಾಕುತ್ತಿದ್ದರು. ಆದರೆ, ಆ ಮಗು ಅವರದ್ದಲ್ಲ ಎಂದು ಸಾರ್ವಜನಿಕರು ಮಕ್ಕಳ ಸಹಾಯವಾಣಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಸಿಬ್ಬಂದಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಿಬ್ಬಂದಿ, ಚನ್ನಪಟ್ಟಣದ ಶಿಶು ಅಭಿವೃದ್ಧಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಶುಕ್ರವಾರ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಸಂಬಂಧಿಸಿದ ಪೋಷಕರು ವಿಚಾರಣೆ ಎದುರಿಸಿದರು.

ಪರಿಚಯಸ್ಥರು ಮಗುವನ್ನು ಬೆಂಗಳೂರಿನಿಂದ ತಂದುಕೊಟ್ಟಿದ್ದಾಗಿ ಆ ಮಹಿಳೆ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ. ಮಗುವಿನ ಮಾರಾಟ ಮತ್ತು ಅಕ್ರಮ ಸಾಗಣೆ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಮಕ್ಕಳ ಕಲ್ಯಾಣ ಸಮಿತಿ ಸೂಚನೆ ಮೇರೆಗೆ ಚನ್ನಪಟ್ಟಣ ಸಿಡಿಪಿಒ ಸಿದ್ದಲಿಂಗಯ್ಯ ಚನ್ನಪಟ್ಟಣ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.