ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಹಿತ್ಯ ಸಮ್ಮೇಳನಕ್ಕೆ ನೋಂದಣಿ ಆರಂಭ

Last Updated 27 ಡಿಸೆಂಬರ್ 2019, 14:19 IST
ಅಕ್ಷರ ಗಾತ್ರ

ರಾಮನಗರ: 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಫೆಬ್ರುವರಿ 5ರಿಂದ 7ರ ವರೆಗೆ ಕಲಬುರ್ಗಿಯಲ್ಲಿ ನಡೆಯಲಿದೆ. ಇದರಲ್ಲಿ ಭಾಗವಹಿಸುವವರು ಪ್ರತಿನಿಧಿಯಾಗಿ ಹೆಸರನ್ನು ₹250 ಪ್ರತಿನಿಧಿ ಶುಲ್ಕ ಪಾವತಿಸಿ ಜನವರಿ 14ರ ಒಳಗಾಗಿ ನೋಂದಾಯಿಸಿಕೊಳ್ಳಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸಿಂ.ಲಿಂ. ನಾಗರಾಜ್ ಹೇಳಿದರು.

ಇಲ್ಲಿನ ಸ್ಫೂರ್ತಿ ಭವನದ ಆವರಣದಲ್ಲಿ ಶುಕ್ರವಾರ ಸಮ್ಮೇಳನದ ಪ್ರತಿನಿಧಿ ನೋಂದಣಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಅವಧಿ ಮೀರಿ ಬರುವ ಕೋರಿಕೆಗಳಿಗೆ ಹಾಗೂ ಸಮ್ಮೇಳನ ನಡೆಯುವ ಸ್ಥಳದಲ್ಲಿ ಪ್ರತಿನಿಧಿಗಳ ನೋಂದಾವಣೆಗೆ ಅವಕಾಶವಿಲ್ಲ. ಕನ್ನಡ ಭಾಷೆ ಉಳಿಯಬೇಕಾದರೆ ಸಾಹಿತ್ಯ ಸಮ್ಮೇಳನಗಳ ಅವಶ್ಯಕತೆ ಇದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳಬೇಕು ಎಂದರು.

ನೋಂದಣಿಗೆ ಸಿಂ.ಲಿಂ. ನಾಗರಾಜ್ ಮೊಬೈಲ್‌ 99022 37729, ಎಚ್.ಪಿ. ನಂಜೇಗೌಡ, 98453 05275, ಬಿ.ಟಿ. ದಿನೇಶ್ (ರಾಮನಗರ) 97311 40555, ಕಲ್ಪನಾ ಶಿವಣ್ಣ (ಮಾಗಡಿ) 80954 08223, ಮತ್ತಿಕೆರೆ ಚಲುವರಾಜು (ಚನ್ನಪಟ್ಟಣ) 90353 56085, ಆರ್.ವಿ. ನಾರಾಯಣ್ (ಕನಕಪುರ) 97437 95579 ಅಥವಾ ವೈಭವ್ ಹೋಂ ಅಪ್ಲೈಯನ್ಸಸ್, ಅರ್ಚಕರಹಳ್ಳಿ, ರಾಮನಗರ ಸಂಪರ್ಕಿಸಬೇಕು ಎಂದು ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಕೋಶಾಧ್ಯಕ್ಷ ಎಚ್.ಪಿ. ನಂಜೇಗೌಡ, ಸಂಘಟನಾ ಕಾರ್ಯದರ್ಶಿ ಎಸ್. ರುದ್ರೇಶ್ವರ, ಚಿನ್ನಗಿರಿಗೌಡ, ಡಿ.ಎಸ್. ಗುರುಪ್ರಸಾದ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT