ಗುರುವಾರ , ಮಾರ್ಚ್ 4, 2021
26 °C

ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಎಚ್‌ಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ನಗರದ ಎಂ.ಜಿ. ರಸ್ತೆಯಲ್ಲಿರುವ ಕನ್ಯಕಾ ಪರಮೇಶ್ವರಿ ದೇವಾಲಯದ ಶತಮಾನೋತ್ಸವ, ಪರಿವಾರ ದೇವತೆಗಳ ಪುನರ್ ಪ್ರತಿಷ್ಠಾಪನೆ ಮತ್ತು ನೂತನ ರಥದ ಉದ್ಘಾಟನೆ ಕಾರ್ಯಕ್ರಮಕ್ಕೆ ಭಾನುವಾರ ಚಾಲನೆ ದೊರೆಯಿತು.

ಬೆಳಿಗ್ಗೆ ಗಣಪತಿ ಪ್ರಾರ್ಥನೆಯೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡವು. ನಂತರದಲ್ಲಿ ಗಣಪತಿ ಪೂಜೆ, ಪುಣ್ಯಾಹ ವಾಚನ, ಮಹಾ ಸಂಕಲ್ಪ, ದೇವನಾಂದಿ, ರಕ್ಷಾ ಬಂಧನ, ಋತ್ವಿಜಾವರಣ, ಜಲಾಧಿವಾಸ, ಪುಷ್ಪಾಧಿವಾಸ, ಗಣಪತಿ ಹೋಮ ಕಾರ್ಯಕ್ರಮಗಳು ನೆರವೇರಿದವು. ಮಧ್ಯಾಹ್ನ 12.30ಕ್ಕೆ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು.

ಸಂಜೆ ದೇವರಿಗೆ ಕಂಕಣ ಬಂಧನ, ಬಿಂಬಶುದ್ಧಿ, ಕಳಸ ಪ್ರತಿಷ್ಠಾಪನೆ, ಪ್ರಾಯಶ್ಚಿತ್ತ ಹೋಮ, ಆದಿವಾಸ ಹೋಮ, ಸಪ್ತಾದಿವಾಸ, ರಾಕ್ಷೋಘ್ನ ಹೋಮ, ವಾಸ್ತು ಹೋಮ ಮತ್ತು ಪ್ರತಿಷ್ಠಾಂಗ ಹೋಮಗಳು, ಅಷ್ಠದಿಗ್ಬಂದನ ಕಾರ್ಯಕ್ರಮಗಳು
ನೆರವೇರಿದವು.

ರಥಕ್ಕೆ ಚಾಲನೆ: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಶಾಸಕಿ ಅನಿತಾ ಕುಮಾರಸ್ವಾಮಿ ಮಧ್ಯಾಹ್ನ ದೇಗುಲದ ಹೊಸ ರಥವನ್ನು ಎಳೆಯುವ ಮೂಲಕ ರಥವನ್ನು ದೇವಿಯ ಸೇವೆಗೆ ಸಮರ್ಪಿಸಿದರು. ಆರ್ಯ ವೈಶ್ಯ ಅಭಿವೃದ್ದಿ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್, ವಾಸವಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಐ.ಎಸ್. ಪ್ರಸಾದ್, ಆರ್ಯವೈಶ್ಯ ಮಹಾಸಭಾ ಅಧ್ಯಕ್ಷ ಕೆ.ಎಲ್. ರತ್ನಶೇಖರ್, ಕಾರ್ಯದರ್ಶಿ ಉಮೇಶ್‌, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ರಾಜಶೇಖರ್‌ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು