ರಾಮನಗರದ ಕಂದಾಯ ಭವನದಲ್ಲಿರುವ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಬೋರ್ಡ್‌ನಲ್ಲಿ ಜಿಲ್ಲೆ ಹೆಸರನ್ನು ‘ಬೆಂಗಳೂರು ದಕ್ಷಿಣ’ ಎಂದು ನಮೂದಿಸಿರುವುದು
ಡಿ.ಕೆ. ಶಿವಕುಮಾರ್
ಡಿ.ಕೆ. ಸುರೇಶ್
ನಿಖಿಲ್ ಕುಮಾರಸ್ವಾಮಿ
ಜಿ.ಎನ್. ನಟರಾಜ್ ಅಧ್ಯಕ್ಷ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಹಿಂದೆ ಬೆಂಗಳೂರಿಗೆ ಒಳಪಟ್ಟಿದ್ದ ರಾಮನಗರವನ್ನು ಕೇಂದ್ರಾಡಳಿತವಾಗಿಟ್ಟುಕೊಂಡೇ ಜಿಲ್ಲೆಯ ಹೆಸರನ್ನು ‘ಬೆಂಗಳೂರು ದಕ್ಷಿಣ’ ಜಿಲ್ಲೆ ಎಂದು ಮರುನಾಮಕರಣ ಮಾಡಬೇಕೆಂದು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದೆವು. ಇದೀಗ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನವಾಗಿರುವುದು ಸಂತೋಷದ ವಿಚಾರ. ಈ ಮಹತ್ವದ ನಿರ್ಧಾರ ತೆಗೆದುಕೊಂಡ ರಾಜ್ಯ ಸರ್ಕಾರಕ್ಕೆ ಧನ್ಯವಾದಗಳು
– ಡಿ.ಕೆ. ಸುರೇಶ್ ಮಾಜಿ ಸಂಸದ
ಜಿಲ್ಲೆಯ ಹೆಸರು ಬದಲಾವಣೆ ಮಾಡಿದ ಕೂಡಲೇ ಜಿಲ್ಲೆ ಅಭಿವೃದ್ಧಿ ಆಗುವುದಿಲ್ಲ. ರಾಜಕೀಯ ಲಾಭಕ್ಕಾಗಿ ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡಿದ್ದಾರೆ. ಜೊತೆಗೆ ಬಿಡದಿಯಲ್ಲಿ ಟೌನ್‌ಶಿಫ್ ಮಾಡೋಕೆ ಹೊರಟಿದ್ದಾರೆ. ರೈತರು ಅದಕ್ಕೆ ವಿರೋಧ ಮಾಡಿದ್ದಾರೆ
– ನಿಖಿಲ್ ಕುಮಾರಸ್ವಾಮಿ ಅಧ್ಯಕ್ಷ ಜೆಡಿಎಸ್ ಯುವ ಘಟಕ
ವಿಶ್ವಮಟ್ಟದಲ್ಲಿ ನಮ್ಮ ಜಿಲ್ಲೆ ರಾರಾಜಿಸಬೇಕಾದರೆ ಜಿಲ್ಲೆ ಹೆಸರಿನೊಂದಿಗೆ ಬೆಂಗಳೂರು ಎಂಬ ಪದ ಇರಬೇಕು. ಇದನ್ನು ಮನಗಂಡ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಿಲ್ಲೆಗೆ ‘ಬೆಂಗಳೂರು ದಕ್ಷಿಣ’ ಎಂದು ಮರುನಾಮಕರಣ ಮಾಡಿದ್ದಾರೆ. ಇದರೊಂದಿಗೆ ಜಿಲ್ಲೆಗೆ ಅಭಿವೃದ್ಧಿಯ ಹೆಬ್ಬಾಗಿಲು ತೆರೆಯಲಿದೆ
– ಜಿ.ಎನ್. ನಟರಾಜ್ ಅಧ್ಯಕ್ಷ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ