ಶಿಕ್ಷಕರ ನೇಮಕಕ್ಕೆ ಆಗ್ರಹ

ಮಂಗಳವಾರ, ಜೂಲೈ 16, 2019
23 °C

ಶಿಕ್ಷಕರ ನೇಮಕಕ್ಕೆ ಆಗ್ರಹ

Published:
Updated:
Prajavani

ಮಾಡಬಾಳ್‌(ಮಾಗಡಿ): ಇಲ್ಲಿನ ವೀರೇಗೌಡನದೊಡ್ಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಖಾಲಿ ಇರುವ ಹಿಂದಿ ಮತ್ತು ಇಂಗ್ಲಿಷ್‌ ಭಾಷಾ ಬೋಧಕರನ್ನು ನೇಮಕ ಮಾಡುವಂತೆ, ಪೋಷಕರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಳಿ ಸಾಂಕೇತಿಕ ಪ್ರತಿಭಟನೆ ನಡೆಸಿದರು.

ಮುಖಂಡ ದೊಡ್ಡಿ ಗೋಪಿ ಮಾತನಾಡಿ ‘ಶತಮಾನೋತ್ಸವದ ಶಾಲೆಯಲ್ಲಿ ಕಳೆದ ವರ್ಷ ಹಿಂದಿ ಮತ್ತು ಇಂಗ್ಲಿಷ್‌ ಭಾಷಾ ಬೋಧಕರಿಲ್ಲದೆ ಮಕ್ಕಳಿಗೆ ತೊಂದರೆಯಾಗಿದೆ. 8ನೇ ತರಗತಿಗೆ ಸೇರಿರುವ ಮಕ್ಕಳಿಗೆ ಇಂಗ್ಲಿಷ್‌ ಮತ್ತು ಹಿಂದಿ ಕಲಿಕೆ ಕಠಿಣವಾಗಿದೆ. ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕು ಎಂದು ಶಾಲೆಗೆ ಮಕ್ಕಳನ್ನು ದಾಖಲು ಮಾಡಿರುವ ಪೋಷಕರು ಒತ್ತಾಯಿಸಿದ್ದಾರೆ’ ಎಂದು ತಿಳಿಸಿದರು.

1ರಿಂದ 7ನೇ ತರಗತಿಯಲ್ಲಿ 105 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಶಿಕ್ಷಕರ ಕೊರತೆ ನೀಗಿಸಬೇಕು ಎಂದು ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಚಂದ್ರಶೇಖರ್‌ ಆಗ್ರಹಪಡಿಸಿದರು.

ಪೋಷಕರಾದ ರಾಜಣ್ಣ, ಕಂಬಣ್ಣ, ಭಾಗ್ಯಮ್ಮ, ಸತೀಶ್‌, ರಜನಿ, ಶ್ವೇತಾ ಮಾತನಾಡಿದರು. ಪೋಷಕರ ಸಮಸ್ಯೆಗಳನ್ನು ಆಲಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌.ಸಿದ್ದೇಶ್ವರ ಐದು ದಿನಗಳ ಒಳಗೆ ಶಾಲೆಗೆ ಶಿಕ್ಷಕರನ್ನು ನೇಮಕ ಮಾಡುವುದಾಗಿ ತಿಳಿಸಿದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !