ಮಾಗಡಿ: ಹಿಂದುಳಿದ ಜಾತಿಗಳಲ್ಲಿ ಒಂದಾಗಿರುವ ಕಾಡುಗೊಲ್ಲ ಸಮುದಾಯದವರಿಗೆ ಜಾತಿ ಪ್ರಮಾಣ ಪತ್ರ ವಿತರಣೆ ಮಾಡುವ ಮೂಲಕ ಸಮುದಾಯದ ಜನರಿಗೆ ಸರ್ಕಾರದ ಸೌಲಭ್ಯ ಸಿಗುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮಕೈಗೊಳ್ಳಬೇಕೆಂದು ತಾಲ್ಲೂಕು ಕಾಡುಗೊಲ್ಲ ಸಮಾಜದ ಅಧ್ಯಕ್ಷ ಸುರೇಶ್ ಮನವಿ ಮಾಡಿದರು.

ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಉಪತಹಶೀಲ್ದಾರ್ ಪ್ರಭಾಕರ್ಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಕಾಡುಗೊಲ್ಲ ಸಮುದಾಯದ ತೀರ ಹಿಂದುಳಿದಿದೆ. ಸಮುದಾಯದಲ್ಲಿ ಇಂದಿಗೂ ಕಡು ಬಡವರಿದ್ದು ಜಾತಿ ಪ್ರಮಾಣ ಪತ್ರ ನೀಡುವ ಬಗ್ಗೆ ನಿರಂತರವಾಗಿ 6 ತಿಂಗಳಿಂದ ಮನವಿ ನೀಡಲಾಗುತ್ತಿದೆ. ಆದರೂ, ನಿರ್ಲಕ್ಷ್ಯ ವಹಿಸಲಾಗುತ್ತಿದೆ ಎಂದರು.

ಕಾಡುಗೊಲ್ಲ ಸಮಾಜಕ್ಕೆ ರಾಜ್ಯದ ಬಹುತೇಕ ತಾಲ್ಲೂಕುಗಳಲ್ಲಿ ತಹಶೀಲ್ದಾರ್ ಜಾತಿ ಪ್ರಮಾಣ ಪತ್ರ ನೀಡಿದ್ದಾರೆ. ಆದರೆ, ಮಾಗಡಿಯಲ್ಲಿ ಜಾತಿ ಪ್ರಮಾಣ ಪತ್ರ ನೀಡಲು ಅಧಿಕಾರಿಗಳು ಹಿಂಜರಿಯುತ್ತಿದ್ದಾರೆ. ಜಾತಿ ಪ್ರಮಾಣ ಪತ್ರ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರೂ ತಳ ಮಟ್ಟದ ಅಧಿಕಾರಿಗಳು ನೀಡದೆ ಇರುವುದರಿಂದ ತೊಂದರೆ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖಂಡರಾದ ಜಯರಾಮು, ಜಯಣ್ಣ, ಗಿರಿಯಪ್ಪ, ಗೋಪಾಲ್, ಶ್ರೀಪತಿಹಳ್ಳಿ ರಾಜಣ್ಣ, ಬಾಚೇನಹಟ್ಟಿ ಮಹಂತೇಶ್, ಮಾರಣ್ಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.