ಬುಧವಾರ, ಜೂನ್ 29, 2022
24 °C

ಶಿಕ್ಷಕರನ್ನು ಗೌರವದಿಂದ ಕಾಣಿ- ಜೆಡಿಎಸ್ ರಾಜ್ಯ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ವಿದ್ಯಾರ್ಥಿಗಳು ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡುವುದರ ಜೊತೆಗೆ ಶಿಕ್ಷಕರಿಗೆ ಗೌರವ ನೀಡುವುದನ್ನು ರೂಢಿಸಿಕೊಳ್ಳಬೇಕು ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ತಾಲ್ಲೂಕಿನ ಕೈಲಾಂಚ ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ನವಚೇತನ ಚಾರಿಟಬಲ್ ಟ್ರಸ್ಟ್ ಫಾರ್ ಡಿಸೆಬಲ್ಸ್ ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್‌ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರತಿಯೊಬ್ಬ ವಿದ್ಯಾರ್ಥಿಯೂ ಶಾಲಾ ಹಂತದಲ್ಲಿ ಶ್ರದ್ಧೆ, ಭಕ್ತಿಯಿಂದ ವಿದ್ಯಾಭ್ಯಾಸ ಮಾಡಬೇಕು. ತಮಗೆ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ವಿದ್ಯಾದಾನ ಮಾಡುತ್ತಿರುವ ಶಿಕ್ಷಕರನ್ನು ಗೌರವದಿಂದ ಕಾಣಬೇಕು ಎಂದು ಹೇಳಿದರು.

ನವಚೇತನ ಚಾರಿಟಬಲ್ ಸಂಸ್ಥೆಯ ಮಂಜುನಾಥ್ ಮಾತನಾಡಿ, ಸಂಸ್ಥೆಯಿಂದ ಇದುವರೆಗೆ 585 ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸುಮಾರು 3 ಲಕ್ಷ 55 ಸಾವಿರ ನೋಟ್ ಬುಕ್‌ ವಿತರಿಸಲಾಗಿದೆ ಎಂದರು.

ಪ್ರೌಢಶಾಲಾ ಮುಖ್ಯಶಿಕ್ಷಕಿ ಗಾಯತ್ರಿದೇವಿ ಸೇರಿದಂತೆ ಕೈಲಾಂಚ ಗ್ರಾ.ಪಂ. ವ್ಯಾಪ್ತಿಯ ಶಾಲೆಗಳ ಶಿಕ್ಷಕಿಯರನ್ನು ಮಹಿಳಾ ದಿನಾಚರಣೆ ಅಂಗವಾಗಿ  ಸನ್ಮಾನಿಸಲಾಯಿತು.

ಜಿ.ಪಂ. ಮಾಜಿ ಅಧ್ಯಕ್ಷ ಎಚ್.ಸಿ. ರಾಜಣ್ಣ, ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ಆರ್. ಪಾಂಡುರಂಗ, ಬಿಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಪಿ. ಅಶ್ವಥ್, ಎಪಿಎಂಸಿ ಮಾಜಿ ಅಧ್ಯಕ್ಷ ದೊರೆಸ್ವಾಮಿ ಮಾತನಾಡಿದರು. ಸಿಆರ್‌ಪಿ ಮೃತ್ಯುಂಜಯ, ಗ್ರಾ.ಪಂ. ಸದಸ್ಯರಾದ ವೆಂಕಟೇಶ್, ಜಿ.ಪಿ. ಗಿರೀಶ್ ವಾಸು, ಅನಿತಾ, ಶಶಿ ರೇಣುಕಾ, ಚಲುವರಾಜು, ಶಿಕ್ಷಕರಾದ ಸತೀಶ್, ಶೇಖರ್, ವೆಂಕಟೇಶ್, ಕವಿತಾ ಇನಾಂದಾರ್ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು