ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಿನೋಯ್ ಸೇರಿ ಐವರಿಗೆ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ

Published : 28 ಸೆಪ್ಟೆಂಬರ್ 2024, 7:19 IST
Last Updated : 28 ಸೆಪ್ಟೆಂಬರ್ 2024, 7:19 IST
ಫಾಲೋ ಮಾಡಿ
Comments

ರಾಮನಗರ: ಜಿಲ್ಲೆಯ ಉಪ ವಿಭಾಗಾಧಿಕಾರಿ ಬಿನೋಯ್ ಕೆ.ಪಿ, ಚನ್ನಪಟ್ಟಣ ತಹಶೀಲ್ದಾರ್ ಟಿ.ಎನ್. ನರಸಿಂಹಮೂರ್ತಿ, ಮಾಗಡಿ ತಹಶೀಲ್ದಾರ್ ಶರತ್‌ಕುಮಾರ್, ಜಿಲ್ಲಾ ಭೂಮಿ ಸಮಾಲೋಚಕ ಪಿ.ವಿ. ರಾಗೇಶ್ ಹಾಗೂ ಚನ್ನಪಟ್ಟಣ ತಾಲ್ಲೂಕು ಮೈಲನಾಯ್ಕನಹಳ್ಳಿ ಗ್ರಾಮ ಆಡಳಿತಾಧಿಕಾರಿ ಪಿ. ಸಿದ್ದರಾಜು ಅವರನ್ನು ಕಂದಾಯ ಇಲಾಖೆಯು ವರ್ಷದ ಅತ್ತುತ್ತಮ ಕಂದಾಯ ಅಧಿಕಾರಿ–2024 ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಇಲಾಖೆಯಲ್ಲಿ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಗುರುತಿಸಿ, ಪ್ರತಿ ವರ್ಷ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. ಪ್ರಶಸ್ತಿಗೆ ಆಯ್ಕೆಯಾದವರಿಗೆ ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT