ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಲ್ಲೆ ಆರೋಪಿ ಬಂಧನಕ್ಕೆ ಒತ್ತಾಯ

ಕಂದಾಯ ಇಲಾಖೆ ನೌಕರರಿಂದ ಅನಿರ್ದಿಷ್ಟಾವಧಿ ಧರಣಿ
Last Updated 19 ಜೂನ್ 2019, 12:20 IST
ಅಕ್ಷರ ಗಾತ್ರ

ರಾಮನಗರ: ಚನ್ನಪಟ್ಟಣ ತಾಲ್ಲೂಕು ಕಚೇರಿಯಲ್ಲಿ ಗ್ರಾಮ ಲೆಕ್ಕಿಗನ ಮೇಲೆ ಹಲ್ಲೆ ನಡೆಸಿರುವ ಆರೋಪಿಯನ್ನು ಬಂಧಿಸುವಂತೆ ಒತ್ತಾಯಿಸಿ ಕಂದಾಯ ನೌಕರರು ಬುಧವಾರ ಇಲ್ಲಿನ ಕಂದಾಯ ಭವನದ ಎದುರು ಅನಿರ್ಧಾಷ್ಠಾವಧಿ ಧರಣಿ ಆರಂಭಿಸಿದರು.

ಪಹಣಿ ತಿದ್ದುಪಡಿಗೆ ಸಂಬಂಧಿಸಿದಂತೆ ಚನ್ನಪಟ್ಟಣ ತಾಲ್ಲೂಕು ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಗ್ರಾಮ ಲೆಕ್ಕಿಗ ಎಸ್.ಜಿ.ಶಿವಲಿಂಗಯ್ಯ ಅವರ ಮೇಲೆ ಔಷಧಿ ಅಂಗಡಿಯ ಮಾಲೀಕರೊಬ್ಬರು ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ಚನ್ನಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಇದೇ 6ರಂದು ಪ್ರಕರಣ ದಾಖಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರಿ ಕಂದಾಯ ನೌಕರರ ಸಂಘದ ಗಮನಕ್ಕೂ ತರಲಾಗಿದೆ. ಅವರ ಮಾರ್ಗದರ್ಶನದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೂ ಇದೇ 12ರಂದು ದೂರು ಸಲ್ಲಿಸಲಾಗಿದೆ. ಆದರೂ ಆರೋಪಿಯನ್ನು ಈತನಕ ಬಂಧಿಸಿಲ್ಲ. ಇದು ಪೊಲೀಸ್ ಇಲಾಖೆಯ ನಿರ್ಲಕ್ಷ್ಯ ಧೋರಣೆಯನ್ನು ತೋರಿಸುತ್ತದೆ ಎಂದು ಗ್ರಾಮ ಲೆಕ್ಕಿಗರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಅಂದಾನೇಗೌಡ ಆರೋಪಿಸಿದರು.

ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಕೆ. ಬೈರಲಿಂಗಯ್ಯ ಮಾತನಾಡಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಅವರಿಗೆ ದೂರು ಸಲ್ಲಿಸಿದ ಬಳಿಕ ಅವರು ತಕ್ಷಣ ನಮ್ಮ ಎದುರೇ ಮೂರು ಬಾರಿ ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿ, ಆರೋಪಿಯನ್ನು ಬಂಧಿಸುವಂತೆ ಸೂಚಿಸಿದ್ದಾರೆ. ಆದರೆ ಏನು ಪ್ರಯೋಜನವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕಂದಾಯ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ್ ಮಾತನಾಡಿ ಕಂದಾಯ ಇಲಾಖೆಯ ಅನೇಕ ಯೋಜನೆಗಳನ್ನು ಸಮರ್ಪವಾಗಿ ಅನುಷ್ಠಾನಗೊಳಿಸುವಲ್ಲಿ ಗ್ರಾಮ ಲೆಕ್ಕಿಗರ ಪಾತ್ರ ಬಹು ಮುಖ್ಯವಾದದ್ದು. ಒಬ್ಬ ಗ್ರಾಮ ಲೆಕ್ಕಿಗರನ್ನು ಕಚೇರಿ ಸಿಬ್ಬಂದಿಯ ಎದುರು ಹಲ್ಲೆ ಮಾಡಿ, ಅವಮಾನಿಸಿರುವುದು ಖಂಡನೀಯ. ಸರ್ಕಾರಿ ನೌಕರರ ಮೇಲೆ ಹಲ್ಲೆ ಮಾಡಿದವರನ್ನು ಕೂಡಲೇ ಬಂಧಿಸಬೇಕು. ಅಲ್ಲಿಯವರೆಗೆ ಧರಣಿ ಮುಂದುವರೆಸುತ್ತೇವೆ ಎಂದು ತಿಳಿಸಿದರು.

ಗ್ರಾಮ ಲೆಕ್ಕಿಗರ ಸಂಘದ ಪದಾಧಿಕಾರಿಗಳಾದ ಸುದೀಪ್, ಜಗದೀಶ್, ಗೋವಿಂದರಾಜು. ಎಂ. ಹರ್ಷ ಇದ್ದರು.

**

ಇದೇ ತಿಂಗಳ 6ರಂದು ಹಲ್ಲೆ ನಡೆದಿದ್ದರೂ ಈವರೆಗೆ ಆರೋಪಿಯನ್ನು ಬಂಧಿಸಿಲ್ಲ. ಪೊಲೀಸರು ಈ ಪ್ರಕರಣದಲ್ಲಿ ನಿರ್ಲಕ್ಷ್ಯ ಧೋರಣೆ ತಾಳಿದ್ದಾರೆ
- ಅಂದಾನೇಗೌಡ, ರಾಜ್ಯ ಗ್ರಾಮ ಲೆಕ್ಕಿಗರ ಸಂಘದ ಅಧ್ಯಕ್ಷ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT