ಮಂಗಳವಾರ, ಡಿಸೆಂಬರ್ 6, 2022
20 °C

ರೋಟರಿ ಅಧ್ಯಕ್ಷರ ಪದಗ್ರಹಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕನಕಪುರ: ಹಾರೋಹಳ್ಳಿ ರೋಟರಿ ಸಂಸ್ಥೆಯ 2021-22ನೇ ಸಾಲಿನ ನೂತನ ಅಧ್ಯಕ್ಷರಾಗಿ ಹರಿಪ್ರಸಾದ್‌ ಮತ್ತು ಕಾರ್ಯದರ್ಶಿಯಾಗಿ ಪ್ರಕಾಶ್‌ ನೇಮಕಗೊಂಡಿದ್ದು, ಅಧಿಕಾರ ಸ್ವೀಕರಿಸಿದರು.

ತಾಲ್ಲೂಕಿನ ಹಾರೋಹಳ್ಳಿ ರೋಟರಿ ಸಂಸ್ಥೆ ಆವರಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಜಿಲ್ಲಾ ಅಸಿಸ್ಟೆಂಟ್‌ ಗವರ್ನರ್‌ ಡಾ.ಪ್ರಾಣೇಶ್‌ ಅಧ್ಯಕ್ಷ ಮತ್ತು ಕಾರ್ಯದರ್ಶಿಗೆ ಅಧಿಕಾರ ಹಸ್ತಾಂತರಿಸಿದರು.

ನಂತರ ಅವರು ಮಾತನಾಡಿ, ‘ರೋಟರಿ ಸಂಸ್ಥೆಯು ಹಾರೋಹಳ್ಳಿ ಮತ್ತು ಮರಳವಾಡಿ ಹೋಬಳಿ ವ್ಯಾಪ್ತಿಯಲ್ಲಿ ಬರುವುದರಿಂದ ರೈತರಿಗೆ ಮತ್ತು ಗ್ರಾಮೀಣ ಮಹಿಳೆಯರಿಗೆ ಹೆಚ್ಚು ಉಪಯುಕ್ತವಾಗುವಂತೆ ಆರೋಗ್ಯ ಶಿಬಿರ, ಸೇವಾ ಚಟುವಟಿಕೆ ಹಮ್ಮಿಕೊಂಡು ಬಂದಿದೆ’ ಎಂದು ತಿಳಿಸಿದರು.

ನೂತನವಾಗಿ ನೇಮಕಗೊಂಡಿರುವ ಅಧ್ಯಕ್ಷ ಮತ್ತು ಕಾರ್ಯದರ್ಶಿ ಉತ್ಸಾಹಿ ಯುವಕರಾಗಿದ್ದಾರೆ. ಸಂಸ್ಥೆಯ ಎಲ್ಲಾ ಪದಾಧಿಕಾರಿಗಳನ್ನು ಜತೆಗೂಡಿಸಿಕೊಂಡು ಉತ್ತಮ ಸೇವಾ ಕೆಲಸ ಮಾಡಬೇಕು ಎಂದು ಶುಭ ಕೋರಿದರು.

ರೋಟರಿ ಮಾಜಿ ಅಧ್ಯಕ್ಷ ಮಹಮದ್‌ ಏಜಾಸ್ ಮಾತನಾಡಿ, ರೋಟರಿಯು ಗ್ರಾಮೀಣ ಪ್ರದೇಶದಲ್ಲಿ ಇರುವುದರಿಂದ ಗ್ರಾಮೀಣ ಜನತೆಗೆ ಉಪಯುಕ್ತವಾಗುವಂತೆ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ಕೊಟ್ಟು ಕೆಲಸ ಮಾಡುತ್ತಿದೆ. ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹ, ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಒತ್ತು ನೀಡಿದೆ. ಮುಂದೆಯೂ ಅದನ್ನು ಮುಂದುವರಿಸಲಿದೆ ಎಂದು ತಿಳಿಸಿದರು.

‘ಈ ಬಾರಿ ಕೋವಿಡ್‌ಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನೇ ಹೆಚ್ಚಾಗಿ ನಡೆಸಲಾಗುವುದು’ ಎಂದರು.

ಮಾಜಿ ಅಧ್ಯಕ್ಷರಾದ ಏಡುಮಡು ಕಾಂತರಾಜು, ಭರತ್, ಪದಾಧಿಕಾರಿಗಳಾದ ಜಗದೀಶ್, ನಾಗರಾಜು, ಕಾಂತರಾಜು, ಗುರುಶಂಕರ್, ಸುನಿಲ್, ಬಸವರಾಜು, ಹೊನ್ನೇಗೌಡ, ರಘುನಾಥ್ ಉಪಸ್ಥಿತರಿದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು