ಅಪರಾಧ ಹಿನ್ನೆಲೆಯುಳ್ಳ ತಾಯಪ್ಪನದೊಡ್ಡಿಯ ಕರಿಯಪ್ಪನ ಮಗ ಮೊಗಪ್ಪ ಅಲಿಯಾಸ್ ಜಿಮ್ಮು ರೌಡಿ ಶೀಟರ್ ಆಗಿದ್ದಾನೆ. ಆತನ ವಿರುದ್ಧ ವಿವಿಧ ಪ್ರಕರಣಗಳು ದಾಖಲಾಗಿವೆ. ಇತ್ತೀಚೆಗೆ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುವುದಿಲ್ಲ ಎಂದು ಮುಚ್ಚಳಿಕೆ ಬರೆದು ಕೊಟ್ಟಿದ್ದ ಆತ, ತನ್ನ ಚಾಳಿ ಮುಂದುವರಿಸಿದ್ದಾನೆ. ಆತನನ್ನು ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಮೇಲಧಿಕಾರಿಗಳಿಗೆ ಪತ್ರ ಬರೆಯಲಾಗುವುದು ಎಂದು ಬಿಡದಿ ಇನ್‌ಸ್ಪೆಕ್ಟರ್ ಶಂಕರ್ ನಾಯಕ್ ತಿಳಿಸಿದರು.