ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನಪಟ್ಟಣ: ಸಂಸದ ಡಿ.ಕೆ. ಸುರೇಶ್ ಮನವಿ ಮೇರೆಗೆ ₹ 9 ಕೋಟಿ ಬಿಡುಗಡೆ

Published 11 ಡಿಸೆಂಬರ್ 2023, 8:48 IST
Last Updated 11 ಡಿಸೆಂಬರ್ 2023, 8:48 IST
ಅಕ್ಷರ ಗಾತ್ರ

ಚನ್ನಪಟ್ಟಣ: ತಾಲ್ಲೂಕಿನ ಗ್ರಾಮೀಣ ಭಾಗದ ಕೆಲವು ರಸ್ತೆಗಳ ಅಭಿವೃದ್ಧಿಗೆ ಸಂಸದ ಡಿ.ಕೆ. ಸುರೇಶ್ ಮನವಿ ಮೇರೆಗೆ ಲೋಕೋಪಯೋಗಿ ಇಲಾಖೆ ₹ 9 ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡಿದೆ.

ತಾಲ್ಲೂಕಿನಲ್ಲಿ ಗ್ರಾ.ಪಂ. ವ್ಯಾಪ್ತಿಯ ಗ್ರಾಮಗಳಲ್ಲಿ ಸಂಸದ ಡಿ.ಕೆ. ಸುರೇಶ್ ಅವರು ಜನಸಂಪರ್ಕ ಸಭೆ ಆಯೋಜಿಸಿದ್ದ ವೇಳೆ ಸಾರ್ವಜನಿಕರು ರಸ್ತೆ ಅಭಿವೃದ್ಧಿ ಬಗ್ಗೆ ಅಹವಾಲುಗಳನ್ನು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಸುರೇಶ್ ಅವರು ಸರ್ಕಾರಕ್ಕೆ ಸಲ್ಲಿಸಿದ್ದ ಕೋರಿಕೆ ಮೇರೆಗೆ ತಾಲ್ಲೂಕಿನ 5 ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಡಾ.ಸೋಮನಾಥ ಅವರು ₹ 9 ಕೋಟಿ ವಿಶೇಷ ಅನುದಾನವನ್ನು ಬಿಡುಗಡೆ ಮಾಡಿದ್ದಾರೆ.

ತಾಲ್ಲೂಕಿನ ಮೆಣಸಿಗನಹಳ್ಳಿ ಗ್ರಾಮದಿಂದ ಭೂಹಳ್ಳಿ ಗ್ರಾಮಕ್ಕೆ ತೆರಳುವ 2.50 ಕಿ.ಮೀ. ರಸ್ತೆ ಅಭಿವೃದ್ಧಿಗೆ ₹ 2.50 ಕೋಟಿ ಅನುದಾನ, ತಾಲ್ಲೂಕಿನ ಮತ್ತೀಕೆರೆ ಗ್ರಾಮದ ಕಂಬದ ಆಂಜನೇಯಸ್ವಾಮಿ ದೇವಸ್ಥಾನದವರೆಗೆ ಸುಮಾರು 600 ಮೀಟರ್ ಉದ್ದದ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ₹ 1 ಕೋಟಿ ಅನುದಾನ, ತಾಲ್ಲೂಕಿನ ಚಕ್ಕೆರೆ ಗ್ರಾಮ ವ್ಯಾಪ್ತಿಯ ದೊಡ್ಡಮಳೂರು ಗ್ರಾಮದಿಂದ ಹೊಟ್ಟಿಗನ ಹೊಸಹಳ್ಳಿ ಗ್ರಾಮಕ್ಕೆ ಮತ್ತು ಚಕ್ಕೆರೆ ಅಡ್ಡರಸ್ತೆಯಿಂದ ಹೊಟ್ಟಿಗನಹೊಸಹಳ್ಳಿ ಗ್ರಾಮಕ್ಕೆ ಸೇರುವ ರಸ್ತೆಯಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ₹ 1 ಕೋಟಿ ಅನುದಾನ,ತಾಲ್ಲೂಕಿನ ಚಿಕ್ಕಬೋರೇಗೌಡನದೊಡ್ಡಿ ಗ್ರಾಮದಿಂದ ಗರಕಹಳ್ಳಿ ಇಗ್ಗಲೂರು ಮುಖ್ಯರಸ್ತೆಗೆ ಹೋಗುವ ರಸ್ತೆಯಲ್ಲಿ 2.50 ಕಿ.ಮೀ ರಸ್ತೆಯ ಡಾಂಬರೀಕರಣ ಕಾಮಗಾರಿಗೆ ₹ 2 ಕೋಟಿ ಅನುದಾನ, ತಾಲ್ಲೂಕಿನ ಕಾಡಂಕನಹಳ್ಳಿ ಸಾವಂದಿಪುರ ರಸ್ತೆಯಿಂದ ಗುವ್ವಾಪುರ ಸಿದ್ದಾಪುರ ಕಲ್ಲಾಪುರ ಜಗದಾಪುರ ಮಾರ್ಗದ ಮಾದೇಗೌಡನದೊಡ್ಡಿ ಸೇರುವ 1.90 ಕಿ.ಮೀ. ಡಾಂಬರೀಕರಣ ಕಾಮಗಾರಿಗೆ ₹ 2.50 ಕೋಟಿ ಅನುದಾನ ಸೇರಿ ಒಟ್ಟು ₹ 9 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ.

ಗ್ರಾಮೀಣಭಾಗದ ರಸ್ತೆಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಲು ಶ್ರಮಿಸಿದ ಸಂಸದ ಡಿ.ಕೆ. ಸುರೇಶ್ ಅವರನ್ನು ತಾಲ್ಲೂಕಿನ ಕಾಂಗ್ರೆಸ್ ಮುಖಂಡರು ಅಭಿನಂದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT