ರಾಮನಗರ: ‘ಮಹಾತ್ಮ ಗಾಂಧೀಜಿ ಅವರ ಬಗ್ಗೆ ಟೀಕಿಸುವವರು ಇತ್ತೀಚೆಗೆ ಹೆಚ್ಚಾಗಿದ್ದಾರೆ. ಅದರಲ್ಲೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದವರದ್ದು (ಆರ್ಎಸ್ಎಸ್) ಅತಿಯಾಯಿತು. ಇದು ಒಳ್ಳೆಯದಲ್ಲ’ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಬೇಸರ ವ್ಯಕ್ತಪಡಿಸಿದರು.

ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ ಮಹಾತ್ಮ ಗಾಂಧೀಜಿ ಜಯಂತಿ ಪ್ರಯುಕ್ತ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ‘ಗಾಂಧೀಜಿ ಈ ದೇಶಕ್ಕೆ ಕೊಟ್ಟ ಕೊಡುಗೆ ಅಪಾರ. ಇಂದು ಪ್ರಪಂಚದಲ್ಲಿ ಯುದ್ದದ ಕಾರ್ಮೋಡ ಆವರಿಸಿ ಅಶಾಂತಿ ತಲೆದೋರಿದೆ. ಇಂತಹ ಸಂದರ್ಭದಲ್ಲಿ ಅಹಿಂಸಾ ಪುರುಷ ಗಾಂಧೀಜಿ ತತ್ವವನ್ನು ಎಲ್ಲರೂ ಪಾಲಿಸಬೇಕು’ ಎಂದರು.

‘ಈ ದೇಶಕ್ಕೆ ಅತಿ ಅಗತ್ಯವಾದ ಬಸವಣ್ಣ, ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವ ಸಿದ್ದಾಂತವನ್ನು ಯಾರೂ ಪಾಲಿಸುತ್ತಿಲ್ಲ. ಸಂವಿಧಾನವನ್ನು ಸಹ ಗೌರವಿಸುತ್ತಿಲ್ಲ. ಈ ಬೆಳವಣಿಗೆ ಒಳ್ಳೆಯದಲ್ಲ. ಸಂವಿಧಾನವನ್ನು ಗೌರವಿಸುವ ಜೊತೆಗೆ ಪ್ರಪಂಚಕ್ಕೆ ದಾರಿದೀಪವಾದ ಗಾಂಧೀಜಿ ಅವರ ಚಿಂತನೆಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು’ ಎಂದು ಹೇಳಿದರು.

‘ಗುಜರಾತ್ನಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆ ಮಾದರಿಯಲ್ಲಿಯೇ ಕರ್ನಾಟಕದಲ್ಲೂ ಗಾಂಧೀಜಿ ಅವರ ಬೃಹತ್ ಪ್ರತಿಮೆ ಸ್ಥಾಪನೆ ಮಾಡಬೇಕು. ಗಾಂಧೀಜಿ ಅವರ ಕನಸಿನಂತೆ ಈ ಮದ್ಯಪಾನವನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಇದಕ್ಕೆ ಜನಪ್ರತಿನಿಧಿಗಳು ದಿಟ್ಟ ಹೆಜ್ಜೆ ಇಡಬೇಕು’ ಎಂದು ಆಗ್ರಹಿಸಿದರು.

‘ನಿರೂದ್ಯೋಗ ಹೆಚ್ಚಾಗಿದ್ದು, ಮುಂದೆ ಮತ್ತಷ್ಟು ತೀವ್ರಗೊಳ್ಳಲಿದೆ. ರಾಜ್ಯ ಸರ್ಕಾರವು ಯುವ ನಿಧಿ ಗ್ಯಾರಂಟಿ ಯೋಜನೆಯಡಿ ನಿರುದ್ಯೋಗಿಗಳಿಗೆ ಈಗ ನೀಡುತ್ತಿರುವ ₹2 ಸಾವಿರ ಭತ್ಯೆ ಯಾವುದಕ್ಕೂ ಸಾಲದು. ಹಾಗಾಗಿ, ಅದನ್ನು ₹10 ಸಾವಿರಕ್ಕೆ ಏರಿಸಬೇಕು’ ಎಂದು ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ಕರುನಾಡ ಸೇನೆ ರಾಜ್ಯ ಉಪಾಧ್ಯಕ್ಷ ಎಂ. ಜಗದೀಶ್ ಐಜೂರು, ಜಿಲ್ಲಾಧ್ಯಕ್ಷ ಸಿ.ಎಸ್. ಜಯಕುಮಾರ್, ತಾಲ್ಲೂಕು ಅಧ್ಯಕ್ಷ ವಿ.ಎನ್. ಗಂಗಾಧರ್, ಮಹಿಳಾ ಅಧ್ಯಕ್ಷೆ ಭಾಗ್ಯ ಸುಧಾ, ಮುಖಂಡರಾದ ಕೆ. ಜಯರಾಮು, ಕುಮಾರ್, ಎಸ್. ಶಿವಮೂರ್ತಿ, ಪ್ರಸನ್ನ, ಕೆಂಪರಾಜು, ವಿಜಯ್ಕುಮಾರ್, ನಾರಾಯಣಸ್ವಾಮಿ, ಪಾರ್ಥಸಾರಥಿ, ಮಹದೇವ್ ಹಾಗೂ ಇತರರು ಇದ್ದರು.

ಗಾಂಧೀಜಿ ಅವರನ್ನು ದೇವರಿಗೆ ಹೋಲಿಸುವ ಪರಿಸ್ಥಿತಿ ಬಂದಿದೆ. ಈ ದೇಶಕ್ಕೆ ಅವರ ತತ್ವ ಮತ್ತು ಸಿದ್ದಾಂತಗಳೇ ಶ್ರೀರಕ್ಷೆಯಾಗಿವೆ. ಅವರನ್ನು ದೇವರಿಗೆ ಹೋಲಿಸುವುದನ್ನು ಬಿಟ್ಟು ಅವರ ಜೀವನಾದರ್ಶವನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು
–ವಾಟಾಳ್ ನಾಗರಾಜ್, ಅಧ್ಯಕ್ಷ, ಕನ್ನಡ ಚಳವಳಿ ವಾಟಾಳ್ ಪಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.