ಮಂಗಳವಾರ, ಸೆಪ್ಟೆಂಬರ್ 28, 2021
21 °C

ಬಡ್ಡಿ ಹಣ ನೀಡದ್ದಕ್ಕೆ ಆರ್‌ಟಿಐ ಕಾರ್ಯಕರ್ತನ ಹತ್ಯೆ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ತಾವರೆಕೆರೆಯ ತೋಟದ ಮನೆಯಲ್ಲಿ ಮಾಹಿತಿ ಹಕ್ಕು ಕಾರ್ಯಕರ್ತ ವೆಂಕಟೇಶ್ ಎಂಬುವರನ್ನು ಹತ್ಯೆ ಮಾಡಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹಣದ ವಿಚಾರವಾಗಿ ಕೊಲೆ ನಡೆದಿರುವುದು ಪ್ರಾಥಮಿಕ ತನಿಖೆ ವೇಳೆ
ಬಯಲಾಗಿದೆ.

ತಾವರೆಕೆರೆಯ ವರಕೆರೆ ಬೀದಿ ನಿವಾಸಿ ಟಿ.ಎನ್. ಪ್ರದೀಪ್‌ ಕುಮಾರ್ (33), ಮಂಜುನಾಥ ನಗರ ನಿವಾಸಿ ಟಿ.ಸಿ. ಸತೀಶ್‌ (20) ಹಾಗೂ ಎಎಸ್‌ಬಿ ಲೇಔಟ್‌ ನಿವಾಸಿ ತೇಜಸ್‌ಕುಮಾರ್ (22) ಬಂಧಿತರು. ಇತರ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಸಾಲವೇ ಕಾರಣ: ಆರೋಪಿಗಳು ಹತ್ಯೆಗೀಡಾದ ವ್ಯಕ್ತಿ ಜೊತೆ ವ್ಯಾವಹಾರಿಕ ನಂಟು ಹೊಂದಿದ್ದು, ಅದೇ ಕಾರಣಕ್ಕೆ ಕೊಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು