ರೂರಲ್‌ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ

ಶುಕ್ರವಾರ, ಮೇ 24, 2019
30 °C

ರೂರಲ್‌ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ

Published:
Updated:
Prajavani

ಕನಕಪುರ: ಗ್ರಾಮಾಂತರ ವಿದ್ಯಾ ಪ್ರಚಾರಕ ಸಂಘದ ರೂರಲ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ್ದು 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಶೇಕಡ 90ಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳು ಸುಶೀಲ ಶೇ94.33, ರಂಜಿತ ಶೇ94.17, ಕವಿತ ಶೇ94.4, ಮೇಘನ ಶೇ92.50, ಹರ್ಷಿತ ಶೇ91.50, ಮಲ್ಲಿಕಾರ್ಜುನ್ ಶೇ91.17, ಸಂದೀಪ ಶೇ91, ಪರೀನ್‌ತಾಜ್‌ ಶೇ90.83, ಅನನ್ಯ ಶೇ90.33.

ವಿದ್ಯಾರ್ಥಿಗಳ ಉತ್ತಮ ಸಾಧನೆ ಕುರಿತು ಆರ್‌.ಇ.ಎಸ್ ಆಡಳಿತ ಮಂಡಳಿ ಕಾರ್ಯದರ್ಶಿ ಸಿ.ರಮೇಶ್‌ ಮೆಚ್ಚುಗೆ ಸೂಚಿಸಿದ್ದಾರೆ.

ಎಸ್‌.ಕರಿಯಪ್ಪ ಅವರು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಸಿಗಬೇಕೆಂಬ ಆಶಯದೊಂದಿಗೆ ಈ ವಿದ್ಯಾ ಸಂಸ್ಥೆಯನ್ನು ಕಟ್ಟಿ ಗ್ರಾಮೀಣ ಮಕ್ಕಳಿಗೆ ಅರ್ಪಣೆ ಮಾಡಿದ್ದಾರೆ. ಅದನ್ನು ಸಾರ್ಥಕಗೊಳಿಸಬೇಕೆಂದು ಹೇಳಿದ್ದಾರೆ.

ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿರುವ ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲರು, ಪ್ರಾಧ್ಯಾಪಕ ವರ್ಗ, ಸಿಬ್ಬಂದಿ ವರ್ಗ ಅಭಿನಂದಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !