ರಾಮನಗರ: ‘ಪೌರ ಕಾರ್ಮಿಕರು ಹಾಗೂ ಸಫಾಯಿ ಕರ್ಮಚಾರಿಗಳ ಜೀವನವನ್ನು ಮೇಲ್ದರ್ಜೆಗೇರಿಸುವ ಸದುದ್ದೇಶದಿಂದ ಸರ್ಕಾರ ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಸವಲತ್ತುಗಳನ್ನು ತಲುಪಿಸಲು ಕ್ರಮ ವಹಿಸಬೇಕು’ ಎಂದು ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುರಳಿ ಅಶೋಕ ಸಾಲಪ್ಪ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ನಿಗಮದ 2023-24 ಹಾಗೂ 2024-25ನೇ ಸಾಲಿನ ಬೆಂಗಳೂರು ದಕ್ಷಿಣ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ನಗರಸಭೆ, ಪುರಸಭೆ ಹಾಗೂ ಎಸ್ಸಿಪಿ-ಟಿಎಸ್ಪಿ ಅನುದಾನದಲ್ಲಿ ಪೌರ ಕಾರ್ಮಿಕರು ಮತ್ತು ಮ್ಯಾನ್ಯುವೆಲ್ ಸ್ಕ್ಯಾವೆಂಜರ್ಸ್ ಕಲ್ಯಾಣ ಕಾರ್ಯಕ್ರಮಗಳಿಗೆ ಅನುದಾನ ಮೀಸಲಿರಿಸಬೇಕು’ ಎಂದರು.

‘ಪೌರ ಕಾರ್ಮಿಕರ ಕಾಲೊನಿ ಅಭಿವೃದ್ಧಿ, ಮನೆ ದುರಸ್ತಿ, ವಿದ್ಯಾರ್ಥಿವೇತನ ಹಾಗೂ ಇನ್ನಿತರ ಸೌಲಭ್ಯಗಳಿಗೆ ಆ ಅನುದಾನ ವಿನಿಯೋಗಿಸಬೇಕು. ಕಾರ್ಮಿಕರನ್ನು ಗುರುತಿಸಲು, ಗೌರವಿಸಲು ಪೌರ ಕಾರ್ಮಿಕರ ದಿನಾಚರಣೆಯನ್ನು, ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ದಿನದಂದು ಕ್ರೀಡಾ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಅವರ ಮಕ್ಕಳಲ್ಲಿರುವ ಕಲೆಯನ್ನು ಗುರುತಿಸಿ ವೇದಿಕೆ ಕಲ್ಪಿಸಬೇಕು’ ಎಂದು ಸಲಹೆ ನೀಡಿದರು.

‘ಕಾರ್ಮಿಕರಿಗೆ ಅಗತ್ಯ ಸಮವಸ್ತ್ರ, ಮಾಸ್ಕ್, ಗ್ಲೌಸ್ ಇತರ ಸಲಕರಣೆ-ಸಾಮಗ್ರಿಗಳನ್ನು ಸಮರ್ಪಕವಾಗಿ ಒದಗಿಸಬೇಕು. ನಿವೇಶನ, ವಸತಿ ಸೌಲಭ್ಯ, ಅವರ ಮಕ್ಕಳಿಗೆ ವಿದ್ಯಾರ್ಥಿವೇತನ, ಪ್ರೋತ್ಸಾಹಧನ, ಸ್ವಯಂ ಉದ್ಯೋಗಕ್ಕಾಗಿ ಸಾಲ ಇತರೆ ಸೌಲಭ್ಯಗಳನ್ನು ಅರ್ಹರಿಗೆ ಸಕಾಲದಲ್ಲಿ ಒದಗಿಸಬೇಕು’ ಎಂದು ಸೂಚಿಸಿದರು.

‘ಜಿಲ್ಲೆಯಲ್ಲಿ ಪೌರ ಕಾರ್ಮಿಕರ ಹಲವು ಹುದ್ದೆಗಳು ಖಾಲಿ ಇವೆ. ಇಬ್ಬರು ನಿರ್ವಹಿಸುವ ಕೆಲಸವನ್ನು ಒಬ್ಬರೇ ನಿರ್ವಹಿಸುತ್ತಿದ್ದು, ಅವರಿಗೆ ಕೆಲಸದ ಒತ್ತಡ ಹಾಗೂ ಅನಾರೋಗ್ಯ ಉಂಟಾಗುತ್ತಿದೆ. ಕಾರ್ಮಿಕರ ಆರೋಗ್ಯ ಕಾಳಜಿಯ ಹಿತದೃಷ್ಟಿಯಿಂದ ಆರೋಗ್ಯ ವಿಮೆ ಮಾಡಿಸಬೇಕು. ಆರೋಗ್ಯ ಶಿಬಿರಗಳನ್ನು ಏರ್ಪಡಿಸಬೇಕು’ ಎಂದು ಹೇಳಿದರು.

ನಿಗಮದಡಿ ಸ್ವಾವಲಂಬಿ ಸಾರಥಿ ಯೋಜನೆ, ಲ್ಯಾಪ್ಟಾಪ್ ಯೋಜನೆ, ಉದ್ಯಮಶೀಲತೆ ಯೋಜನೆ, ಮೈಕ್ರೋಕ್ರೆಡಿಟ್ (ಪ್ರೇರಣೆ) ಯೋಜನೆ, ನೇರಸಾಲ ಯೋಜನೆಯಡಿ ಜಿಲ್ಲೆಯಲ್ಲಿ ನಿಗದಿತ ಅರ್ಜಿಗಳು ಸ್ವೀಕೃತಿಯಾಗದಿರುವ ಬಗ್ಗೆ ಸಾಲಪ್ಪ ಅವರು ಪರಿಶೀಲಿಸಿದರು. ಸರ್ಕಾರಿ ಯೋಜನೆಗಳು ಹಾಗೂ ಸೌಲಭ್ಯಗಳ ಬಗ್ಗೆ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.

ನಿಗಮದ ವ್ಯವಸ್ಥಾಪಕ ನಿರ್ದೇಶಕ ಟಿ. ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶಿವಕುಮಾರ್, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ದೀಪ ಎಸ್. ಬಳ್ಳಾರಿ, ಸಫಾಯಿ ಕರ್ಮಚಾರಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು, ನಗರಸಭೆಗಳ ಪೌರಾಯುಕ್ತರು, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಮುಖ್ಯಾಧಿಕಾರಿಗಳು ಹಾಗೂ ಇತರರರು ಇದ್ದರು.

‘ನೋಟಿಸ್ ನೀಡಲು ಸೂಚನೆ’

‘ಪೌರ ಕಾರ್ಮಿಕರು ಮತ್ತು ಸಫಾಯಿ ಕರ್ಮಚಾರಿಗಳಿಗೆ ಸಕಾಲದಲ್ಲಿ ಸರ್ಕಾರಿ ಸೌಲಭ್ಯಗಳು ತಲುಪದಿದ್ದಲ್ಲಿ ಸಂಬಂಧಿಸಿದ ಇಲಾಖೆಗಳಿಗೆ ನೋಟಿಸ್ ನೀಡಬೇಕು. ಖಾಯಂ ಅಥವಾ ಹೊರಗುತ್ತಿಗೆ ಪೌರಕಾರ್ಮಿಕರು ಸೇವೆಯಲ್ಲಿದ್ದಾಗ ಮರಣ ಹೊಂದಿದ್ದಲ್ಲಿ ಅವರ ಕುಟುಂಬದವರಿಗೆ ಕೆಲಸ ಇಲ್ಲವೇ ಪರಿಹಾರ ಮೊತ್ತವನ್ನು ಕಡ್ಡಾಯವಾಗಿ ಪಾವತಿಸಬೇಕು. ಈ ಕುರಿತು ನಿಗಾ ವಹಿಸಬೇಕು’ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಸಾಲಪ್ಪ ಅವರು ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.