ಮಂಚನಾಯ್ಕನಹಳ್ಳಿ ಗ್ರಾ.ಪಂ ಅಧ್ಯಕ್ಷರಾಗಿ ಸತೀಶ್ ಕುಮಾರ್

ಬಿಡದಿ: ಜಿಲ್ಲೆಯಲ್ಲಿಯೇ ಅತಿಹೆಚ್ಚು ಆದಾಯ ಬರುವ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ತಾಲ್ಲೂಕಿನ ಮಂಚನಾಯ್ಕನ
ಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ವಿ. ಸತೀಶ್ ಕುಮಾರ್ ಮತ್ತು ಉಪಾಧ್ಯಕ್ಷರಾಗಿ ರಮ್ಯಾ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಗಾದಿ ಹಿಡಿಯಲು ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಪ್ರಬಲ ಪೈಪೋಟಿ ಏರ್ಪ ಟ್ಟಿತ್ತು. ಪಂಚಾಯಿತಿಯಲ್ಲಿ 34 ಸದಸ್ಯರಿದ್ದಾರೆ. ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗ ಮತ್ತು ಉಪಾಧ್ಯಕ್ಷ ಸ್ಥಾನ ಬಿಸಿಎಂ ‘ಎ’ ಮಹಿಳೆಗೆ ಮೀಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ನಾಗೇಶ್ ಎ. ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಭಾಗ್ಯಮ್ಮ ಸ್ಪರ್ಧಿಸಿದ್ದರು. ಕಾಂಗ್ರೆಸ್ ಬೆಂಬಲಿತರಾಗಿ ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಕುಮಾರ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ರಮ್ಯಾ ಸ್ಪರ್ಧಿಸಿದ್ದರು. ಸತೀಶ್ ಕುಮಾರ್ 17 ಮತ ಮತ್ತು ರಮ್ಯಾ 15 ಮತ ಪಡೆದು ಆಯ್ಕೆಯಾದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.