ರಾಮನಗರ: 2025-26ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅನುಷ್ಠಾನಗೊಳ್ಳುತ್ತಿರುವ ವಿದ್ಯಾರ್ಥಿವೇತನ ಯೋಜನೆಗಳಾದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆ (1ರಿಂದ 8ನೇ ತರಗತಿ), ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಯೋಜನೆ, ಐಐಟಿ ಐಐಎಂ ಇತರ ಉತ್ತೇಜನ ಯೋಜನೆ ಹಾಗೂ ಎಂಫಿಲ್ ಮತ್ತು ಪಿಎಚ್.ಡಿ ಫೆಲೋಶಿಪ್ ಯೋಜನೆ, ಬಿಎಸ್ಸಿ ನರ್ಸಿಂಗ್ ಉತ್ತೇಜನ ಯೋಜನೆ ಹಾಗೂ ವಿದೇಶಿ ವಿದ್ಯಾರ್ಥಿವೇತನ ಯೋಜನೆಗಳಡಿ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುವ ಸಂಬಂಧ ಎಸ್ಎಸ್ಪಿ ಪೋರ್ಟಲ್ ಹಾಗೂ ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ನ. 30ರವರೆಗೆ ಅವಧಿ ವಿಸ್ತರಿಸಲಾಗಿದೆ.

ಅರ್ಜಿಯನ್ನು https://sevasindhu.karnataka.gov.in ಮೂಲಕ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕೊಠಡಿ ಸಂಖ್ಯೆ: 308, ಕಂದಾಯ ಭವನ, ರಾಮನಗರ ಇಲ್ಲಿ ಕಚೇರಿಯ ವೇಳೆಯಲ್ಲಿ ಖುದ್ದು ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 080-27271104, ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ: 8277799990 ಅಥವಾ ಮಾಹಿತಿ ಕೇಂದ್ರದ ಸಿಬ್ಬಂದಿ ಮೊಬೈಲ್ ಸಂಖ್ಯೆ: 9886558821, 9880297132, 8197514161 ಅಥವಾ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ: 8277799990 ಇವರನ್ನು ಸಂಪರ್ಕಿಸಬೇಕು ಎಂದು ಬೆಂಗಳೂರು ದಕ್ಷಿಣ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.