ಗುರುವಾರ , ಫೆಬ್ರವರಿ 27, 2020
19 °C

ಶಾಲಾ ವಾರ್ಷಿಕೋತ್ಸವ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಾಗಡಿ: ಹೊಸಪಾಳ್ಯದ ಗ್ರಾಮೀಣ ವಸತಿ ಪ್ರೌಢಶಾಲೆ ವಾರ್ಷಿಕೋತ್ಸವ ಹಾಗೂ  ಮಕ್ಕಳಿಂದ ‘ಕುರುಕ್ಷೇತ್ರ’ ನಾಟಕ ಪ್ರದರ್ಶನ ನಡೆಯಲಿದೆ.

ಹುಲಿಕಟ್ಟೆ ಗ್ರಾಮೀಣ ವಸತಿ ವಿದ್ಯಾಸಂಸ್ಥೆ ಅಧ್ಯಕ್ಷ ಎಚ್‌.ಸಿ.ಬಾಲಕೃಷ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಪಂಚಾಯಿತಿ ಸದಸ್ಯ ಎಚ್‌,ಎನ್‌,ಅಶೋಕ್‌ ಉದ್ಘಾಟಿಸಲಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದೇಶ್ವರ.ಎಸ್‌. ಬಹುಮಾನ ವಿತರಿಸುವರು. ಕನ್ನಡ ಸಹೃದಯ ಬಳಗದ ಅಧ್ಯಕ್ಷ ಹಾಗೂ ಇತಿಹಾಸ ಸಂಶೋಧಕ ಡಾ.ಮುನಿರಾಜಪ್ಪ, ತಾಲ್ಲೂಕು ದೈಹಿಕ ಶಿಕ್ಷಣ ಅಧಿಕಾರಿ ಸಿ.ಬಿ.ಅಶೋಕ್‌, ನಿವೃತ್ತ ಮುಖ್ಯಶಿಕ್ಷಕ ಎಚ್‌.ಹೊನ್ನಗಂಗಯ್ಯ, ತಾಲ್ಲೂಕು ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಹೊಸಪಾಳ್ಯ ಲೋಕೇಶ್‌, ಕಾಂಗ್ರೆಸ್‌ ಮುಖಂಡ ಎಂ.ಕೆ.ಧನಂಜಯ, ಜೆ.ಆರ್‌.ರವೀಶ್‌, ರಂಗಶಾಮಯ್ಯ ಭಾಗವಹಿಸಲಿದ್ದಾರೆ. ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಎಸ್‌.ವೆಂಕಟೇಶಯ್ಯ ಅವರನ್ನು ಸನ್ಮಾನಿಸಲಾಗುವುದು ಎಂದು ಮುಖ್ಯಶಿಕ್ಷಕ ವೆಂಕಟೇಶಯ್ಯ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)