ರಾಮನಗರ: ‘ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳನ್ನು ಇನ್ನು ಮುಂದೆ ಹೊರಗಿನ ಯಾವುದೇ ಕಾರ್ಯಕ್ರಮಗಳಿಗೆ ಪ್ರೇಕ್ಷಕರಾಗಿ ಕರೆದುಕೊಂಡು ಹೋಗುವಂತಿಲ್ಲ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಮಹತ್ವದ ಆದೇಶವನ್ನು ಹೊರಡಿಸಿದೆ.

ಆ ಮೂಲಕ ಜನಪ್ರತಿನಿಧಿಗಳು, ರಾಜಕೀಯ ಮುಖಂಡರು, ಸರ್ಕಾರೇತರ ಸಂಘ– ಸಂಸ್ಥೆಗಳು, ಸಂಘಟನೆಗಳ ಶೈಕ್ಷಣಿಕೇತರ ಕಾರ್ಯಕ್ರಮಗಳಿಗೆ ವಿದ್ಯಾರ್ಥಿಗಳನ್ನು ಕರೆದೊಯ್ಯುವ ಪ್ರವೃತ್ತಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿ.ರಶ್ಮಿ ಮಹೇಶ್ ಬ್ರೇಕ್ ಹಾಕಿದ್ದಾರೆ. ಆದೇಶ ಉಲ್ಲಂಘಿಸುವವರ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆ ನೀಡಿದ್ದಾರೆ.

ಶಿಕ್ಷಕರೂ ಹೋಗುವಂತಿಲ್ಲ: ಶಾಲಾವಧಿಯಲ್ಲಿ ತರಬೇತಿ, ಕಾರ್ಯಕ್ರಮ, ಕಾರ್ಯಾಗಾರ, ಸಭೆ ಇನ್ನಿತರ ಚಟುವಟಿಕೆಗಳಿಗೆ ಶಿಕ್ಷಕರನ್ನು ನಿಯೋಜನೆ ಅಥವಾ ಕರ್ತವ್ಯದ ಮೇರೆಗೆ ಮೌಖಿಕ ಅಥವಾ ಲಿಖಿತ ಆದೇಶದ ಮೂಲಕ ಕಳುಹಿಸಬಾರದು. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿಯ ಸಿಇಒ ಸಹ ಇಂತಹ ನಿರ್ದೇಶನಗಳನ್ನು ನೀಡುವಂತಿಲ್ಲ.

ತರಗತಿ ಅವಧಿಯಲ್ಲಿ ಶಿಕ್ಷಕರು, ಮುಖ್ಯ ಶಿಕ್ಷಕರನ್ನು ಸಭೆಗಳಿಗೆ ಕರೆಯಬಾರದು. ವಿಡಿಯೊ ಕಾನ್ಫರೆನ್ಸ್ ಮಾಡಬಾರದು. ಇಲಾಖೆ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿದಾಗ ತರಗತಿಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಅವರು ಆದೇಶದಲ್ಲಿ→ ಸೂಚಿಸಿದ್ದಾರೆ.

ಇತರ ಪರೀಕ್ಷೆಗೆ ಬ್ರೇಕ್: ಶಾಲಾ ದಿನಗಳಲ್ಲಿ ಯಾವುದೇ ಬಾಹ್ಯ ಪರೀಕ್ಷೆಗಳನ್ನು (ಕೆಪಿಎಸ್ಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರ, ಖಾಸಗಿ ಸಂಸ್ಥೆ ಅಥವಾ ಇತರ ಸಂಸ್ಥೆಗಳು ನಡೆಸುವ ಪರೀಕ್ಷೆಗಳು) ಶಾಲಾವರಣದಲ್ಲಿ ನಡೆಸಬಾರದು. ನಡೆಸಲೇಬೇಕಾದ ಅಗತ್ಯವಿದ್ದಲ್ಲಿ, ಅದು ಸಾರ್ವತ್ರಿಕ ರಜೆ ಅಥವಾ ಬೇಸಿಗೆ ರಜೆಯಲ್ಲಿ ನಿಯಮಾನುಸಾರ ನಡೆಸಬೇಕು.

ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲಾವಧಿಯಲ್ಲಿ ಕಡ್ಡಾಯವಾಗಿ ತರಗತಿ ಯಲ್ಲಿರಬೇಕು. ಭೋದನೆ ಮತ್ತು ಕಲಿಕೆ ಅಡಚಣೆ ಇಲ್ಲದೆ ನಡೆಯಬೇಕು. ಮಕ್ಕಳ ಶೈಕ್ಷಣಿಕ ಪ್ರಗತಿ, ಫಲಿತಾಂಶ ಸುಧಾರಣೆ ಹಾಗೂ ಗುಣಮಟ್ಟದ ಬೋಧನೆಗೆ ಆದ್ಯತೆ ನೀಡಬೇಕು.

ಸಾಫ್ಟ್ವೇರ್ಗಳಲ್ಲಿ ಡೇಟಾ ಎಂಟ್ರಿ ಕೆಲಸ ಮಾಡುವಂತೆ ಶಿಕ್ಷಕರು ಅಥವಾ ಮುಖ್ಯ ಶಿಕ್ಷಕರಿಗೆ ಡಿಡಿಪಿಐಗಳು, ಬಿಇಒಗಳು, ಡಯಟ್ ಪ್ರಾಂಶುಪಾಲರು, ಇಲಾಖೆಯ ಯಾವುದೇ ಮಟ್ಟದ ಅಧಿಕಾರಿಗಳು, ಖಾಸಗಿ ಸಂಸ್ಥೆಗಳ ಅಥವಾ ಯಾವುದೇ ಜ್ಞಾನ ಪಾಲುದಾರರು ಮೌಖಿಕ ಅಥವಾ ಲಿಖಿತ ಆದೇಶ ನೀಡಬಾರದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

‘ಖಾಸಗಿ ಶಾಲೆಗಳಿಗೂ ಅನ್ವಯಿಸಲಿ’

‘ಹೊರಗಿನ ಕಾರ್ಯಕ್ರಮಗಳಿಗೆ ಪ್ರೇಕ್ಷಕರಾಗಿ ಕರೆದೊಯ್ಯಬಾರದು ಎಂಬ ಆದೇಶವು ಖಾಸಗಿ ಶಾಲೆಗಳಿಗೂ ಅನ್ವಯವಾಗಬೇಕು. ಈ ಆದೇಶ ಕಟ್ಟುನಿಟ್ಟಾಗಿ ಜಾರಿಯಾಗಲಿ’ ಎಂದು ಅನುದಾನ ರಹಿತ ಖಾಸಗಿ ಶಾಲಾ ಆಡಳಿತ ಮಂಡಳಿ ಒಕ್ಕೂಟದ ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಜಿ ಅಧ್ಯಕ್ಷ ಪಟೇಲ್ ಸಿ. ರಾಜು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ಸರ್ಕಾರೇತರ ಸಂಸ್ಥೆಗಳು ಸೇರಿ ಸಂಘ–ಸಂಸ್ಥೆ, ಸಂಘಟನೆಗಳ ಶೈಕ್ಷಣಿಕೇತರ ಕಾರ್ಯಕ್ರಮಗಳಿಗೆ ವಿದ್ಯಾರ್ಥಿಗಳ ಕರೆದೊಯ್ಯುವುದು ಸಾಮಾನ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಮಕ್ಕಳನ್ನು ಪ್ರೇಕ್ಷಕರಾಗಿ ಕರೆದೊಯ್ಯುವ, ಶೈಕ್ಷಣಿಕೇತರ ಕೆಲಸಗಳಿಗೆ ಶಿಕ್ಷಕರ ಬಳಕೆ ಕುರಿತು ದೂರುಗಳು ಇದ್ದವು. ಆ ಹಿನ್ನೆಲೆಯಲ್ಲಿ ಆದೇಶ ಹೊರಡಿಸಲಾಗಿದೆ
ವಿ.ರಶ್ಮಿ ಮಹೇಶ್, ಪ್ರಧಾನ ಕಾರ್ಯದರ್ಶಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ

ಇಲಾಖೆ ಆದೇಶ ಕ್ರಾಂತಿಕಾರಕವಾಗಿದೆ. ಮಕ್ಕಳ ಗುಣಾತ್ಮಕ ಶಿಕ್ಷಣಕ್ಕೆ ಹೆಚ್ಚಿನ ಒತ್ತು ಸಿಕ್ಕಂತಾಗಿದೆ
ಚಂದ್ರಶೇಖರ ನುಗ್ಗಲಿ ಅಧ್ಯಕ್ಷ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.