ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವ್ಯಾಜ್ಯ ಇತ್ಯರ್ಥಕ್ಕೆ ರಾಮನಗರ ಉಪ ವಿಭಾಗಾಧಿಕಾರಿ ಮಂಜುನಾಥ್ ಸಲಹೆ

Last Updated 17 ಏಪ್ರಿಲ್ 2022, 6:43 IST
ಅಕ್ಷರ ಗಾತ್ರ

ಚನ್ನಪಟ್ಟಣ: ‘ಗ್ರಾಮೀಣ ಜನತೆ ತಮ್ಮ ಸಮಸ್ಯೆ ಪರಿಹರಿಸಿಕೊಳ್ಳಲು ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ರಾಮನಗರ ಉಪ ವಿಭಾಗಾಧಿಕಾರಿ ಮಂಜುನಾಥ್ ಸಲಹೆ ನೀಡಿದರು.

ತಾಲ್ಲೂಕಿನ ಅಂಕುಶನಹಳ್ಳಿಯಲ್ಲಿ ಶನಿವಾರ ಆಯೋಜಿಸಿದ್ದ ‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸುವ ಉದ್ದೇಶದಿಂದ ಈ ಕಾರ್ಯಕ್ರಮ ನಡೆಯುತ್ತಿದೆ ಎಂದರು.

ಗ್ರಾಮೀಣ ಜನರ ಜಮೀನಿಗೆ ಸಂಬಂಧಪಟ್ಟಂತಹ ಕೆಲವು ವ್ಯಾಜ್ಯಗಳು ಉಪ ವಿಭಾಗಾಧಿಕಾರಿ ನ್ಯಾಯಾಲಯದಲ್ಲಿವೆ. ಅವುಗಳನ್ನು ಪರಿಹರಿಸಿಕೊಳ್ಳಲು ಈ ಕಾರ್ಯಕ್ರಮ ಅನುಕೂಲವಾಗಿದೆ. ಗ್ರಾಮೀಣ ಜನತೆ ಉಪ ವಿಭಾಗಾಧಿಕಾರಿ ನ್ಯಾಯಾಲಯಕ್ಕೆ ಅಲೆಯುವ ಬದಲು ಇಲ್ಲಿಯೇ ಪರಿಹಾರ ಮಾಡಿಕೊಳ್ಳಬಹುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿರುಪಾಕ್ಷಿಪುರ ಹೋಬಳಿ ಹಾಗೂ ಸುಳ್ಳೇರಿ ಗ್ರಾಮ ಪಂಚಾಯಿತಿಯ ಜನತೆ ತಮ್ಮ ಸಮಸ್ಯೆಗಳನ್ನು ನಿವೇದಿಸಿಕೊಂಡರು. ಕುಡಿಯುವ ನೀರು, ಬೀದಿದೀಪ, ಸ್ಮಶಾನದ ಸ್ಥಳ, ಕೆರೆ, ಕಟ್ಟೆ ಒತ್ತುವರಿ, ಜಮೀನಿನ ಖಾತೆ ಬದಲಾವಣೆ ಸೇರಿದಂತೆ ವಿವಿಧ ರೀತಿಯ ಸಮಸ್ಯೆಗಳನ್ನು ಲಿಖಿತ ಹಾಗೂ ಮೌಖಿಕವಾಗಿ ತಿಳಿಸಿ ಪರಿಹರಿಸಿಕೊಂಡರು.

ತಹಶೀಲ್ದಾರ್ ಎಂ. ನಾಗೇಶ್ ಮಾತನಾಡಿ, ಈ ಭಾಗದಲ್ಲಿ ಇರುವ ಸಮಸ್ಯೆಗಳ ಬಗ್ಗೆ ಜನರು ಅಧಿಕಾರಿಗಳಲ್ಲಿ ನಿವೇದನೆ ಮಾಡಿಕೊಂಡಿದ್ದಾರೆ. ಕೆಲವು ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹಾರ ಮಾಡಲಾಗಿದೆ. ಇನ್ನೂ ಕೆಲವು ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ ನೀಡಲಾಗುವುದು ಎಂದರು.

ತಾ.ಪಂ. ಇಒ ಚಂದ್ರು, ಉಪ ತಹಶೀಲ್ದಾರ್ ಉಮಾದೇವಿ, ಸುಳ್ಳೇರಿ ಗ್ರಾ.ಪಂ. ಅಧ್ಯಕ್ಷೆ ಪಲ್ಲವಿ ಯೋಗೇಶ್, ಸ್ಥಳೀಯ ಜನಪ್ರತಿನಿಧಿಗಳು, ತಾಲ್ಲೂಕುಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT