ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವನಹಳ್ಳಿ: ಜಿಲ್ಲೆಯಲ್ಲಿ ಕೋವಿಡ್-19 ಏಳು ಪ್ರಕರಣ

Last Updated 26 ಜೂನ್ 2020, 15:43 IST
ಅಕ್ಷರ ಗಾತ್ರ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ ಆರು ಹಾಗೂ ದೇವನಹಳ್ಳಿ ತಾಲ್ಲೂಕಿನಲ್ಲಿ ಒಂದು ಕೋವಿಡ್-19 ಸೋಂಕು ಪ್ರಕರಣ ವರದಿಯಾಗಿವೆಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.

ನೆಲಮಂಗಲ ತಾಲ್ಲೂಕಿನಲ್ಲಿ, ಕೊರೋನಾ ವೈರಾಣು ಸೋಂಕಿತ ವ್ಯಕ್ತಿಯ (ರೋಗಿ ಸಂಖ್ಯೆ-8547) ಪ್ರಾಥಮಿಕ ಸಂಪರ್ಕ ಹೊಂದಿದ್ದ, 51 ವರ್ಷದ ಪುರುಷ (ಪಿ-9901), 21 ವರ್ಷದ ಯುವತಿ(ಪಿ-9902), 14 ವರ್ಷದ ಬಾಲಕಿ(ಪಿ-9903), 38 ವರ್ಷದ ಮಹಿಳೆ(ಪಿ-9904), 10 ವರ್ಷದ ಬಾಲಕ(ಪಿ-9905) ಹಾಗೂ 26 ವರ್ಷದ ಯುವಕನ(ಪಿ-9906), ಆರೋಗ್ಯ ತಪಾಸಣೆ ನಡೆಸಿದಾಗ ಸೋಂಕು ದೃಢಪಟ್ಟಿದೆ.

ದೇವನಹಳ್ಳಿ ಪಟ್ಟಣದ 22 ವರ್ಷದ ಯುವಕ(ಪಿ-9907) ಇನ್‌ಫ್ಲೂಯೆನ್ಜಾ ಮಾದರಿಯ ಕಾಯಿಲೆ(ಐ‌ಎಲ್‌ಐ)ಯಿಂದ ಬಳಲುತ್ತಿದ್ದ ಹಿನ್ನೆಲೆ ಆರೋಗ್ಯ ತಪಾಸಣೆ ಮಾಡಿಸಿದಾಗ ಸೋಂಕು ದೃಢಪಟ್ಟಿರುತ್ತದೆ.

ಸೋಂಕಿತ ವ್ಯಕ್ತಿಗಳು ಬೆಂಗಳೂರಿನ ವಿಕ್ಟೋರಿಯಾ ಹಾಗೂ ಸಿ.ವಿ.ರಾಮನ್ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT