ಭಾನುವಾರ, ಜುಲೈ 25, 2021
25 °C

ಹೊಲಿಗೆ ಯಂತ್ರ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕನಕಪುರ: ತಾಲ್ಲೂಕಿನ ಮರಳವಾಡಿ ಹೋಬಳಿ ಚೀಲೂರು ಗ್ರಾಮ ಪಂಚಾಯಿತಿ ವತಿಯಿಂದ 57 ಫಲಾನುಭವಿಗಳಿಗೆ ಉಚಿತ ಹೊಲಿಗೆ ಯಂತ್ರವನ್ನು ಬುಧವಾರ ವಿತರಣೆ ಮಾಡಲಾಯಿತು.

ಪಂಚಾಯಿತಿಯ 14ನೇ ಹಣಕಾಸಿನ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪಂಗಡ ಅನುದಾನದಲ್ಲಿ ಹೊಲಿಗೆ ಯಂತ್ರವನ್ನು ಖರೀದಿ ಮಾಡಲಾಗಿತ್ತು. ಕೋವಿಡ್‌-19 ಸಮಸ್ಯೆಯಿಂದ ವಿತರಣೆ ಮಾಡಲಾಗಿರಲಿಲ್ಲ.

ಪಂಚಾಯಿತಿ ಅಧ್ಯಕ್ಷೆ ಶೋಭಾ ಸಿದ್ದಪ್ಪ ಅವರು ಫಲಾನುಭವಿಗಳಿಗೆ ಹೊಲಿಗೆ ಯಂತ್ರವನ್ನು ವಿತರಣೆ ಮಾಡಿದ ಮಾತನಾಡಿ, ಮಹಿಳೆಯರು ಆರ್ಥಿಕವಾಗಿ ಪ್ರಗತಿಯಾಗಲು ಸ್ವಂತ ಉದ್ಯಮವನ್ನು ಮಾಡಬೇಕು. ಅದಕ್ಕಾಗಿ ಹೊಲಿಗೆ ಯಂತ್ರ ನೀಡಲಾಗುತ್ತಿದೆ. ಇದನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದು ಸಲಹೆ ನೀಡಿದರು. 

ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ದಯಾನಂದ ಸಾಗರ್‌, ಕಾರ್ಯದರ್ಶಿ ಶಿಲ್ಪಾ, ಸದಸ್ಯರಾದ ಲೋಕೇಶ್‌, ಕುರುಬಳ್ಳಿ ತಿಮ್ಮಪ್ಪ, ಹುಲಿಸಿದ್ದೇಗೌಡನದೊಡ್ಡಿ ಸಿದ್ದಪ್ಪ, ಜಕ್ಕಸಂದ್ರ ಕೇಬಲ್‌ ರವಿ, ಚೋಳೂರಯ್ಯ, ಪಂಚಾಯಿತಿ ಸಿಬ್ಬಂದಿ ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.