ರಾಮನಗರ ಬಸ್ ನಿಲ್ದಾಣದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹತ್ತಲು ಮುಂದಾದ ಮಹಿಳೆಯರು (ಸಂಗ್ರಹ ಚಿತ್ರ)
ಮಹಿಳೆಯರ ಆತ್ಮಗೌರವ ಮತ್ತು ಸ್ವಾವಲಂಬನೆ ಹೆಚ್ಚಿಸುವಲ್ಲಿ ಶಕ್ತಿ ಯೋಜನೆಯು ಮಹತ್ವದ ಪಾತ್ರ ವಹಿಸಿದೆ. ಯೋಜನೆಯಿಂದಾಗಿ ಕಳೆದೆರಡು ವರ್ಷಗಳಲ್ಲಿ ಬದಲಾಗಿರುವ ಮಹಿಳೆಯರ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಯನ್ನು ಸರ್ಕಾರ ಅಧ್ಯಯನ ಮಾಡಬೇಕು
– ಸುಮಂಗಲಾ ಸಿದ್ದರಾಜು ಸಾಹಿತಿ ರಾಮನಗರ
ಮಹಿಳಾ ಪರವಾದ ಯಾವುದೇ ಯೋಜನೆ ಜಾರಿಯಾದರೂ ಜನ ಅದನ್ನು ವಿರೋಧಿಸುತ್ತಾರೆ. ಇದಕ್ಕೆ ಕಾರಣ ನಮ್ಮಲ್ಲಿರುವ ಪುರುಷ ಪ್ರಧಾನ ವ್ಯವಸ್ಥೆ. ಈ ಮನಸ್ಥಿತಿಯನ್ನು ನಿಧಾನವಾಗಿ ಬದಲಾಯಿಸಿ ಸ್ತ್ರೀಯರ ಆತ್ಮಗೌರವ ಹೆಚ್ಚಿಸುವಲ್ಲಿ ಶಕ್ತಿ ಯೋಜನೆ ಪ್ರಮುಖ ಪಾತ್ರ ವಹಿಸಿದೆ
– ಮೇಘನ ರಾಮನಗರ
ಆರ್ಥಿಕ ಸಮಸ್ಯೆ ಕಾರಣಕ್ಕೆ ಹೊರಗೆ ಓಡಾಡಲು ಯೋಚಿಸುತ್ತಿದ್ದ ಹೆಣ್ಣು ಮಕ್ಕಳು ಇಂದು ಉದ್ಯೋಗ ಶಿಕ್ಷಣ ಸೇರಿದಂತೆ ಹಲವು ಉದ್ದೇಶಗಳಿಗೆ ಉಚಿತವಾಗಿ ಬಸ್‌ಗಳಲ್ಲಿ ಸಂಚರಿಸಲು ಶಕ್ತಿ ಯೋಜನೆ ನೆರವಾಗಿದೆ. ಸ್ತ್ರೀ ಸ್ವಾವಲಂಬನೆ ದೃಷ್ಟಿಯಲ್ಲಿ ಇದೊಂದು ಕ್ರಾಂತಿಕಾರಿ ಯೋಜನೆ
ಅರ್ಷಿಯಾ ರಾಮನಗರ
ಶಕ್ತಿ ಯೋಜನೆ ನಿಜಕ್ಕೂ ಸ್ತ್ರೀ ಸ್ವಾವಲಂಬನೆಗೆ ಪೂರಕವಾಗಿದೆ. ಯೋಜನೆ ಬಳಿಕ ಬಸ್ಸುಗಳು ತುಂಬಿ ತುಳುಕುತ್ತಿವೆ. ಹೆಚ್ಚಾಗಿರುವ ಪ್ರಯಾಣಿಕರ ಸಂಖ್ಯೆಗೆ ತಕ್ಕಂತೆ ಬಸ್ಸುಗಳ ಸಂಖ್ಯೆಯನ್ನು ಸಹ ಸರ್ಕಾರ ಹೆಚ್ಚಿಸಬೇಕು –