ಮಾಗಡಿ: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಎರಡು ವರ್ಷ ಪೂರೈಸಿದ ಹಿನ್ನೆಲೆ ಸೋಮವಾರ ಪಟ್ಟಣದ ಸರ್ಕಾರಿ ಬಸ್ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರಿಗೆ ಸಿಹಿ ಹಂಚಿ ಪೂಜೆ ಸಲ್ಲಿಸುವುದರ ಮೂಲಕ ಸಂಭ್ರಮಾಚರಣೆ ಮಾಡಲಾಯಿತು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ನುಡಿದಂತೆ ನಡೆದಿದೆ. ಶಕ್ತಿ ಯೋಜನೆಯಡಿಯಲ್ಲಿ 500 ಕೋಟಿ ಮಹಿಳೆಯರು ಪ್ರಯಾಣಿಸಿರುವುದು ಸಂತಸದ ವಿಷಯ ಎಂದು ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಕಲ್ಕೆರೆ ಶಿವಣ್ಣ ತಿಳಿಸಿದರು.

ಮಾಗಡಿ ಘಟಕ ವ್ಯವಸ್ಥಾಪಕ ಮಂಜುನಾಥ್ ಮಾತನಾಡಿ, ಶಕ್ತಿ ಯೋಜನೆಯನ್ನು ಮಹಿಳೆಯರು ಸದುಪಯೋಗ ಪಡಿಸಿಕೊಂಡಿದ್ದಕ್ಕೆ ಸಾರಿಗೆ ಸಂಸ್ಥೆಯು ಸಂಭ್ರಮಿಸುತ್ತಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಎರಡು ಹೊಸ ವಿದ್ಯುತ್ ಚಾಲಿತ ಬಸ್ ಬಿಡಲಾಗಿದೆ ಎಂದರು.

ಡಿಪೋ ಸಿಬ್ಬಂದಿ ಚಂದ್ರಶೇಖರ್ ಮಾತನಾಡಿ, ರಾಜ್ಯ ಸಾರಿಗೆ ಸಂಸ್ಥೆಯಲ್ಲಿ ದುಡಿಯುತ್ತಿರುವ ನೌಕರರ ವೇತನವನ್ನು ಕಳೆದ ಐದು ವರ್ಷಗಳಿಂದ ಹೆಚ್ಚಿಸಿಲ್ಲ. ಸಾರ್ವಜನಿಕರಿಗೆ ಅನೇಕ ಕೊಡುಗೆಗಳನ್ನು ನೀಡುತ್ತಿದೆ. ನೌಕರರ ವೇತನವನ್ನು ಕಾರ್ಮಿಕ ಇಲಾಖೆ ಅನುಸಾಎ ಹೆಚ್ಚಳ ಮಾಡಲಿ ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈ ವೇಳೆ ಚಂದ್ರಶೇಖರ್, ರಾಮಾಂಜನೇಯ, ಕಾಳಯ್ಯ, ವಿಮಲಾ, ಕಿರಣ್, ಜಯಂತ್, ಜಯಲಕ್ಷ್ಮಮ್ಮ ಸೇರಿದಂತೆ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.