ಚನ್ನಪಟ್ಟಣ: ಮಹಿಳೆಯರಿಗೆ ಬೇಕಾಗಿರುವುದು ಕನಿಕರವಲ್ಲ, ಸಹಕಾರ. ಮಹಿಳೆಗೆ ಅವಕಾಶ ನೀಡಿದರೆ ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡುತ್ತಾರೆ ಎಂದು ಶೀಲಾ ಯೋಗೇಶ್ವರ್ ಅಭಿಪ್ರಾಯಪಟ್ಟರು.

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಭಾನುವಾರ ಗೌಡಗೆರೆ ಚಾಮುಂಡೇಶ್ವರಿ ಬಸವಪ್ಪ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಉದ್ಯೋಗಿನಿ (ಸ್ವಯಂ ಉದ್ಯೋಗಗಳ ಉಚಿತ ತರಬೇತಿ) ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮಹಿಳೆಯರಲ್ಲಿ ಹಲವಾರು ಕೌಶಲಗಳಿವೆ. ಆದರೆ ಸೂಕ್ತ ತರಬೇತಿ ಹಾಗೂ ಮಾರ್ಗದರ್ಶನ ಕೊರತೆಯಿಂದ ಆ ಕೌಶಲಗಳು ಹೊರಬರುತ್ತಿಲ್ಲ ಎಂದರು.

ಮಹಿಳೆಯರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಶ್ರೀ ಕ್ಷೇತ್ರದ ವತಿಯಿಂದ ಉದ್ಯೋಗಿನಿ ಯೋಜನೆಯ ಅಡಿ ನುರಿತ ತರಬೇತುದಾರರಿಂದ ಸ್ವಯಂ ಉದ್ಯೋಗಗಳ ಉಚಿತ ತರಬೇತಿ ನೀಡಲಾಗುತ್ತದೆ. ಶಿಬಿರಾರ್ಥಿಗಳು ತಯಾರಿಸುವ ವಸ್ತುಗಳನ್ನು ಖರೀದಿಸಿ ಉತ್ತೇಜನ ನೀಡಲಾಗುತ್ತದೆ ಎಂದು ಕ್ಷೇತ್ರದ ಧರ್ಮದರ್ಶಿ ಡಾ.ಮಲ್ಲೇಶ್ ಗುರೂಜಿ ಹೇಳಿದರು.

ಎಂ.ಕೆ.ದೊಡ್ಡಿ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಸಹನಾ ಪಾಟೀಲ, ಕಸಾಪ ಜಿಲ್ಲಾಧ್ಯಕ್ಷ ಬಿ.ಟಿ.ನಾಗೇಶ್ ಮಾತನಾಡಿದರು. ಟ್ರಸ್ಟ್ ಅಧ್ಯಕ್ಷ ಬಾಬು, ರಮ್ಯ, ಕೌಶಲ್ಯ ಅಭಿವೃದ್ಧಿ ಅಧಿಕಾರಿ ಜ್ಯೋತಿ ಪ್ರಕಾಶ್, ಅಭಿಲಾಷ್ ತಿಟ್ಟಮಾರನಹಳ್ಳಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.