ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

'ಶಿವಕುಮಾರ ಸ್ವಾಮೀಜಿ ಪ್ರತಿಮೆ ಶೀಘ್ರ ಲೋಕಾರ್ಪಣೆ'

ವೀರಾಪುರದಲ್ಲಿ ಪ್ರತಿಮೆ ನಿರ್ಮಾಣ: ಕಾಮಗಾರಿ ಚುರುಕುಗೊಳಿಸಲು ಸೂಚನೆ
Published 1 ಫೆಬ್ರುವರಿ 2024, 4:29 IST
Last Updated 1 ಫೆಬ್ರುವರಿ 2024, 4:29 IST
ಅಕ್ಷರ ಗಾತ್ರ

ಕುದೂರು: ಡಾ. ಶಿವಕುಮಾರ ಸ್ವಾಮೀಜಿ ಹುಟ್ಟೂರು ವೀರಾಪುರದಲ್ಲಿ ನಿರ್ಮಾಣವಾಗುತ್ತಿರುವ ಶ್ರೀಗಳ 111 ಅಡಿ ಎತ್ತರದ ಪ್ರತಿಮೆ ಕಾಮಗಾರಿ ಸ್ಥಳಕ್ಕೆ ಸಂಸದ ಡಿ.ಕೆ. ಸುರೇಶ್ ಹಾಗೂ ಶಾಸಕ ಎಚ್.ಸಿ. ಬಾಲಕೃಷ್ಣ ಮಂಗಳವಾರ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು.

‘ಶ್ರೀಗಳ ಪ್ರತಿಮೆ ನಿರ್ಮಾಣ ಕಾರ್ಯ ಈಗಾಗಲೇ ವಿಳಂಬವಾಗಿದೆ.ಪ್ರತಿಮೆ ನಿರ್ಮಾಣ ಕಾರ್ಯ ಈಗ ಚುರುಕಿನಿಂದ ನಡೆಯುತ್ತಿದೆ’ ಎಂದು ನಂತರ ಸಂಸದ ಡಿ.ಕೆ. ಸುರೇಶ್ ಹೇಳಿದರು.

ಸೋಲೂರು ರಸ್ತೆಯಿಂದ ವೀರಾಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಹಾಗೂ ಶ್ರೀಗಳ ಹುಟ್ಟೂರಿನ ರಸ್ತೆ ತೀರಾ ಹದಗೆಟ್ಟಿದ್ದು ಅಭಿವೃದ್ಧಿಗೊಳಿಸಲು ಸಂಬಂಧಪಟ್ಟ ಇಂಜಿನಿಯರ್‌ಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

‘ಶ್ರೀಗಳ ಪ್ರತಿಮೆಯನ್ನು ಆದಷ್ಟು ಬೇಗ ಲೋಕಾರ್ಪಣೆಗೊಳಿಸುವುದು ನಮ್ಮ ಆದ್ಯ ಕರ್ತವ್ಯ’ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ  ಹೇಳಿದರು.

ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಹೊನ್ನಪ್ಪ, ಕೆಆರ್‌ಐಡಿಎಲ್‌  ಇಂಜಿನಿಯರ್ ಚಂದ್ರಶೇಖರ್, ಗುತ್ತಿಗೆದಾರ ದೀಪು ಜೊತೆಗಿದ್ದರು.

ಕುದೂರು ಹೋಬಳಿಯ ವೀರಾಪುರ ಗ್ರಾಮದಲ್ಲಿ ನಡೆಯುತ್ತಿರುವ ಡಾ. ಶಿವಕುಮಾರ ಸ್ವಾಮೀಜಿ 111 ಅಡಿ ಎತ್ತರದ ಪ್ರತಿಮೆ ನಿರ್ಮಾಣ ಕಾರ್ಯ 
ಕುದೂರು ಹೋಬಳಿಯ ವೀರಾಪುರ ಗ್ರಾಮದಲ್ಲಿ ನಡೆಯುತ್ತಿರುವ ಡಾ. ಶಿವಕುಮಾರ ಸ್ವಾಮೀಜಿ 111 ಅಡಿ ಎತ್ತರದ ಪ್ರತಿಮೆ ನಿರ್ಮಾಣ ಕಾರ್ಯ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT