ಮಾಗಡಿ: ಮಡಿವಾಳ ಮಾಚಿದೇವ ಗುರುಪೀಠದ ಅಧ್ಯಕ್ಷ ಶಿವಯೋಗಾನಂದಪುರಿ ಸ್ವಾಮೀಜಿ ಗುರುವಾರ ಬೆಳಗ್ಗೆ ಶಿವೈಕ್ಯರಾದರು. ಅವರಿಗೆ 78 ವರ್ಷ ವಯಸ್ಸಾಗಿತ್ತು. 2005ರಲ್ಲಿ ಗುರುಪೀಠಾಧ್ಯಕ್ಷರಾಗಿ ಮಠದ ಅಭಿವೃದ್ಧಿಗೆ ಶಕ್ತಿ ಮೀರಿ ಪ್ರಾಮಾಣಿಕವಾಗಿ ಶ್ರಮಿಸಿದ್ದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಕೊಡಿಗೆಹಳ್ಳಿಯಲ್ಲಿ ಶನಿವಾರ ಬೆಳಗ್ಗೆ 11ಕ್ಕೆ ಸ್ವಾಮೀಜಿ ಅವರ ಅಂತ್ಯಕ್ರಿಯೆ ನಡೆಯಲಿದೆ.

ಸಮುದಾಯದ ಅಧ್ಯಕ್ಷ ಡಾ.ರವಿಕುಮಾರ್, ಮಾಜಿ ಅಧ್ಯಕ್ಷ ಎಚ್.ಸಿ.ರುದ್ರಪ್ಪ, ಮಡಿವಾಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ರಾಜ್ಯ ಮಡಿವಾಳ ಸಂಘದ ಅಧ್ಯಕ್ಷ ನಂಜಪ್ಪ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಬಿ, ರಂಗಸ್ವಾಮಿ, ರಾಜಣ್ಣ, ರಾಮನಗರ ವೀರಮಡಿವಾಳ ಮಾಚಿದೇವ ಸಂಘದ ಅಧ್ಯಕ್ಷ ಮಂಟೆದಯ್ಯ, ಪ್ರಧಾನ ಕಾರ್ಯದರ್ಶಿ ಟಿ.ಲೋಕೇಶ್ ಹಾಗೂ ಪದಾಧಿಕಾರಿಗಳು, ಮಾಗಡಿ ಮಾಚಿದೇವ ಮಡಿವಾಳರ ಸಂಘದ ಅಧ್ಯಕ್ಷ ಟಿ.ಎಂ.ಶ್ರೀನಿವಾಸ್ ಹಾಗೂ ಪದಾಧಿಕಾರಿಗಳು ಸೇರಿದಂತೆ ಅನೇಕ ಸಮಾಜದ ಮುಖಂಡರು ಮತ್ತು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.