ಬಿಡದಿ: ರಾಜ್ಯದಲ್ಲಿ ಮೇ 4ರವರೆಗೆ ಅಗತ್ಯ ಸೇವೆ ಹೊರತುಪಡಿಸಿ ಎಲ್ಲವೂ ಬಂದ್ ಆಗಲಿದೆ. ಅಗತ್ಯ ಸರಕುಗಳು ಮತ್ತು ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಹೊರತುಪಡಿಸಿ ಎಲ್ಲಾ ಅಂಗಡಿಗಳನ್ನು ಮುಚ್ಚತಕ್ಕದ್ದು ಎಂದು ಸರ್ಕಾರ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ.

ಪಟ್ಟಣದ ವ್ಯಾಪ್ತಿಯಲ್ಲಿ ಬುಧವಾರ ಸಂಜೆಯಿಂದಲೇ ಎಲ್ಲಾ ಅಂಗಡಿಗಳನ್ನು ಮುಚ್ಚಲಾಗಿದೆ. ಅಗತ್ಯ ಸೇವೆ ಹೊರತುಪಡಿಸಿ ಎಲ್ಲವನ್ನೂ ಮುಚ್ಚಲಾಗಿದೆ. ಶನಿವಾರ ಮತ್ತು ಭಾನುವಾರ ದಿನಸಿ, ತರಕಾರಿ, ಹಾಲು ಮಾರಾಟದ ಅಂಗಡಿಗಳು ಬೆಳಿಗ್ಗೆ 6ರಿಂದ 10ರವರೆಗೆ ಮಾತ್ರ ತೆರೆದಿರುತ್ತವೆ. ಈ ಬಗ್ಗೆ ಪುರಸಭೆ ಅಧಿಕಾರಿಗಳು ಈಗಾಗಲೇ ಪಟ್ಟಣದ ಅಂಗಡಿ ಮಾಲೀಕರಿಗೆ ಮಾಹಿತಿ ನೀಡಿದ್ದಾರೆ. ಈ ನಿಟ್ಟಿನಲ್ಲಿ ಪೊಲೀಸರೂ ಕಾರ್ಯೋನ್ಮುಖರಾಗಿದ್ದಾರೆ.

ಎಲ್ಲರೂ ಕಡ್ಡಾಯವಾಗಿ ಸರ್ಕಾರದ ಮಾರ್ಗಸೂಚಿ ಪಾಲಿಸಬೇಕು. ನಿರ್ಲಕ್ಷ್ಯವಹಿಸಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪುರಸಭೆ ಆಡಳಿತ ಎಚ್ಚರಿಕೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.