ರಾಮನಗರ: ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ನಿಯಮಿತ (ಕೆಎಸ್ಐಸಿ)
ಅಧ್ಯಕ್ಷರಾಗಿ ಬೆಂಗಳೂರು ದಕ್ಷಿಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್. ಗಂಗಾಧರ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಚನ್ನಪಟ್ಟಣ ತಾಲ್ಲೂಕಿನ ವಿರುಪಾಕ್ಷಿಪುರ ಹೋಬಳಿಯ ಸೋಗಾಲದ ಗಂಗಾಧರ್ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಡಿಪ್ಲೊಮಾ ಪದವೀಧರ. ರಾಜಕೀಯದ ಜೊತೆಗೆ ಉದ್ಯಮ ವ್ಯವಹಾರದಲ್ಲೂ ತೊಡಗಿಸಿಕೊಂಡಿದ್ದಾರೆ. ಹಿಂದುಳಿದ ವರ್ಗದ ಅವರು ಚನ್ನಪಟ್ಟಣ ತಾಲ್ಲೂಕಿನ ಅಕ್ಕೂರು ಜಿಲ್ಲಾ ಪಂಚಾಯಿತಿ ಕ್ಷೇತ್ರದ ಸದಸ್ಯರಾಗಿ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿದ್ದ ಅವರು 2023ರ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು.

ಅಂಬಿಗರ ಚೌಡಯ್ಯ ಮಹಸಭಾದ ಉಪಾಧ್ಯಕ್ಷರಾಗಿರುವ ಅವರು, ಬೆಂಗಳೂರಿನಲ್ಲಿರುವ ಕ್ರಿಯೇಟಿವ್ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಸಂಸ್ಥಾಪಕ ಅಧ್ಯಕ್ಷ ಕೂಡ. ಕೆಂಗೇರಿ ಉಪನಗರದ ರೋಟರಿ ಸೇವಾ ಟ್ರಸ್ಟ್ ಅಧ್ಯಕ್ಷ, ಎಫ್ಕೆಸಿಸಿ ಮತ್ತು ಬೆಂಗಳೂರು ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಸದಸ್ಯರಾಗಿರುವ ಅವರು, ರೋಟರಿ ಕ್ಲಬ್ನಲ್ಲಿ ವಿವಿಧ ಹುದ್ದೆಗಳನ್ನು
ಅಲಂಕರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.