ಚಳಿಗಾಲದ ಕಾರಣಕ್ಕೆ ಹಿಪ್ಪುನೇರಳೆ ಉತ್ಪಾದನೆ ಕಡಿಮೆಯಾಗಿದೆ. ಇದರಿಂದಾಗಿ ಮಾರುಕಟ್ಟೆಗೆ ರೇಷ್ಮೆಗೂಡಿನ ಆವಕ ಇಳಿಮುಖವಾಗಿದ್ದು ದರ ಏರಿಕೆಯಾಗಿದೆ. ಸದ್ಯದ ಸ್ಥಿತಿ ಇನ್ನೂ ಎರಡು ತಿಂಗಳು ಮುಂದುವರಿಯಲಿದೆ.
– ಎಂ. ಮಲ್ಲಿಕಾರ್ಜುನ ಸ್ವಾಮಿ, ರೇಷ್ಮೆ ಜಂಟಿ ನಿರ್ದೇಶಕ, ರಾಮನಗರ ಸರ್ಕಾರಿ ರೇಷ್ಮೆಗೂಡು ಮಾರುಕಟ್ಟೆ
ರಾಮನಗರದ ಸರ್ಕಾರಿ ರೇಷ್ಮೆಗೂಡಿನ ಮಾರುಕಟ್ಟೆಯಲ್ಲಿ ದಾಖಲೆಯ ₹905 ದರಕ್ಕೆ ಗೂಡು ಮಾರಾಟ ಮಾಡಿದ ರೇಷ್ಮೆ ಬೆಳೆಗಾರ ಬಸವರಾಜು (ಮಧ್ಯೆ ಇರುವವರು) ಅವರಿಗೆ ಮಾರುಕಟ್ಟೆಯ ಜಂಟಿ ನಿರ್ದೇಶಕ ಎಂ. ಮಲ್ಲಿಕಾರ್ಜುನ ಸ್ವಾಮಿ ಮತ್ತು ಪತ್ರಾಂಕಿತ ವ್ಯವಸ್ಥಾಪಕ ಶ್ರೀನಿವಾಸ್ ಅವರು ಪ್ರಶಂಸಾ ಪತ್ರ ನೀಡಿದರು