ಗ್ರಾಮಪಂಚಾಯಿತಿ ಚುನಾವಣೆಗೆ ಒಂದೇ ನಾಮಪತ್ರ

ಗುರುವಾರ , ಮೇ 23, 2019
32 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ಗ್ರಾಮಪಂಚಾಯಿತಿ ಚುನಾವಣೆಗೆ ಒಂದೇ ನಾಮಪತ್ರ

Published:
Updated:
Prajavani

ಕೋಡಿಹಳ್ಳಿ (ಕನಕಪುರ): ಕೋಡಿಹಳ್ಳಿ ಗ್ರಾಮ ಪಂಚಾಯಿತಿಯ ಮಾರಸಂದ್ರದ ಗ್ರಾಮ ಪಂಚಾಯಿತಿ ಸದಸ್ಯರ ಆಯ್ಕೆಗಾಗಿ ನಡೆಯಲಿರುವ ಉಪ ಚುನಾವಣೆಗೆ ಪವನ್‌ ಕುಮಾರ್‌ ಪಿ. ಎಂಬುವವರು ಗುರುವಾರ ನಾಮಪತ್ರ ಸಲ್ಲಿಸಿದರು.

ಮಾರಸಂದ್ರ ಗ್ರಾಮ ಪಂಚಾಯಿತಿಯ ಸದಸ್ಯರಾಗಿದ್ದ ಎಂ.ಡಿ.ಪುಟ್ಟಸ್ವಾಮಿ ಅಕಾಲಿಕ ಮರಣಕ್ಕೆ ತುತ್ತಾಗಿದ್ದರಿಂದ ಅವರಿಂದ ತೆರವಾದ ಸ್ಥಾನಕ್ಕೆ ಚುನಾವಣೆ ಮೇ 29 ರಂದು ಚುನಾವಣೆ ನಡೆಯಲಿದೆ.

ಸದಸ್ಯ ಸ್ಥಾನಕ್ಕೆ ಮೇ 13 ರಿಂದ ನಾಮಪತ್ರ ಸಲ್ಲಿಸುವ ಅವಕಾಶವಿದೆ. ಗುರುವಾರದವರೆಗೆ ಯಾವುದೇ ನಾಮಪತ್ರ ಸಲ್ಲಿಕೆಯಾಗಿರಲಿಲ್ಲ. ಗುರುವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು ಪವನ್‌ಕುಮಾರ್‌ ಪಿ. ಎಂಬುವರು ಮಾತ್ರ ನಾಮಪತ್ರ ಸಲ್ಲಿಸಿದ್ದಾರೆ.

ಶುಕ್ರವಾರ ನಾಮಪತ್ರ ಪರಿಷ್ಕರಣೆಯಾಗಲಿದೆ. ಮೇ 20ರಂದು ನಾಮಪತ್ರ ವಾಪಸ್‌ ಪಡೆಯಲು ಕೊನೆಯ ದಿನ. ಚುನಾವಣೆಗೆ ಒಂದೇ  ನಾಮಪತ್ರ ಸಲ್ಲಿಕೆಯಾಗಿರುವುದರಿಂದ ನಾಮಪತ್ರ ಸಲ್ಲಿಸಿರುವವರನ್ನೇ ಅವಿರೋಧವಾಗಿ ಆಯ್ಕೆ ಮಾಡುವುದಾಗಿ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಶಿಕ್ಷಣ ಇಲಾಖೆಯ ಗಂಗಾಧರಯ್ಯ ಸಿ. ತಿಳಿಸಿದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್‌.ಎಂ.ಕೃಷ್ಣಮೂರ್ತಿ ಸಹಾಯಕ ಚುನಾವಣಾಧಿಕಾರಿಯಾಗಿದ್ದರು. ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕೆ.ಎಂ.ಮಾದೇಶ್‌, ಪಂಚಾಯಿತಿ ಅಧ್ಯಕ್ಷ ನಂದೀಶ್‌ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು, ಮಾರಸಂದ್ರ ಗ್ರಾಮದ ಮುಖಂಡರು ನಾಮ ಪತ್ರ ಸಲ್ಲಿಕೆಯ ವೇಳೆ ಇದ್ದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !