ಸಾಮಾಜಿಕ ಬಹಿಷ್ಕಾರದ ಕುರಿತು ಈಗಾಗಲೇ ದೂರು ಕೊಟ್ಟಿದ್ದೇವೆ. ಗ್ರಾಮಕ್ಕೆ ಬುಧವಾರ ಪೊಲೀಸರು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಭೇಟಿ ನೀಡಲಿದ್ದಾರೆ. ಆಗ ಏನು ಬೆಳವಣಿಗೆಯಾಗಲಿದೆ ಎಂಬುದನ್ನು ನೋಡಿಕೊಂಡು ಮುಂದಿನ ನಡೆಯನ್ನು ನಿರ್ಧರಿಸಲಾಗುವುದು.
ಗೋಪಾಲ್ ಬನವಾಸಿ, ಗ್ರಾಮಸ್ಥ
ಸಾಮಾಜಿಕ ಬಹಿಷ್ಕಾರ ಹಾಕಿರುವ ಗ್ರಾಮಕ್ಕೆ ಭೇಟಿ ನೀಡಿ ದಲಿತ ಸಮುದಾಯದವರ ಜೊತೆ ಸಭೆ ನಡೆಸಿದ್ದೇನೆ. ಅಲ್ಲಿನ ವಾಸ್ತವ ಸ್ಥಿತಿ ಕುರಿತು ಮೇಲಧಿಕಾರಿಗಳ ಗಮನಕ್ಕೆ ತಂದಿರುವೆ. ನಾಳೆ ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ –
ಜೈಪ್ರಕಾಶ್, ಸಹಾಯಕ ನಿರ್ದೇಶಕ, ಸಮಾಜ ಕಲ್ಯಾಣ ಇಲಾಖೆ ಕನಕಪುರ
ಘಟನೆ ಕುರಿತು ಸಂಬಂಧಪಟ್ಟವರು ಬಂದು ಹಾರೋಹಳ್ಳಿ ಠಾಣೆಗೆ ದೂರು ಕೊಟ್ಟರೆ ತಕ್ಷಣ ಪ್ರಕರಣ ದಾಖಲಿಸಿಕೊಳ್ಳಲಾಗುವುದು. ಸಂತ್ರಸ್ತರು ಬಂದು ದೂರನ್ನೇ ನೀಡದಿದ್ದರೆ ನಾವು ಪ್ರಕರಣ ದಾಖಲಿಸಿಕೊಳ್ಳುವುದಾದರೂ ಹೇಗೆ?
ಆರ್. ಶ್ರೀನಿವಾಸ ಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ದಲಿತರ ವಿರುದ್ಧ ಸಾಮಾಜಿಕ ಬಹಿಷ್ಕಾರ ಹಾಕಿದವರ ವಿರುದ್ಧ ದೂರು ಕೊಟ್ಟರೂ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳದೆ ನಿರ್ಲಕ್ಷ್ಯ ತೋರಿದ್ದಾರೆ. ತಕ್ಷಣ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಎಸ್‌ಪಿ ಕಚೇರಿ ಎದುರು ಪ್ರತಿಭಟಿಸಲಾಗುವುದು.
ಎಂ. ನಾಗೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿ, ಅಖಿಲ ಭಾರತ ಬಹುಜನ ಸಮಾಜ ಪಕ್ಷ