ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾನೂನು ಅರಿವಿನ ಕೊರತೆಗೆ ವಿಷಾದ

Last Updated 25 ಅಕ್ಟೋಬರ್ 2021, 6:58 IST
ಅಕ್ಷರ ಗಾತ್ರ

ಚನ್ನಪಟ್ಟಣ: ಸಮಾಜದಲ್ಲಿ ಕಾನೂನು ಅರಿವಿಲ್ಲದಿದ್ದರೆ ಅನಾಹುತಗಳು ಹೆಚ್ಚುತ್ತವೆ ಎಂದು ಸಹಾಯಕ ಸರ್ಕಾರಿ ಅಭಿಯೋಜಕ ವೀರಭದ್ರಯ್ಯ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಭೂಹಳ್ಳಿ ಗ್ರಾಮದ ಬಳಿಯ ನಾಯಕರ ತಾಂಡ್ಯದಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಶನಿವಾರ ನಡೆದ ಕಾನೂನು ಅರಿವು ಕಾರ್ಯಾಗಾರದಲ್ಲಿ ಮಾತನಾಡಿದರು.

ಮನುಷ್ಯನಿಗೆ ಜೀವಿಸಲು ನೀರು, ಗಾಳಿ, ಬೆಳಕು ಅಗತ್ಯವೋ ಅದೇ ರೀತಿ ಕಾನೂನು ಅರಿವು ಅವಶ್ಯಕವಾಗಿದೆ. ಪ್ರತಿಯೊಬ್ಬರು ಕಾನೂನನ್ನು ಗೌರವಿಸುವ ಜೊತೆಗೆ ಪಾಲಿಸಬೇಕು ಎಂದರು.

ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಬೋಜೇಗೌಡ ಮಾತನಾಡಿ, ಗ್ರಾಮೀಣ ಪ್ರದೇಶದ ಜನರಿಗೆ ಕಾನೂನಿನ ಬಗ್ಗೆ ತಿಳಿವಳಿಕೆ ಅವಶ್ಯಕ. ಕ್ಷುಲ್ಲಕ ಕಾರಣಗಳಿಗೆ ಅನಾವಶ್ಯಕವಾಗಿ ಪೊಲೀಸ್ ಠಾಣೆ ಹಾಗೂ ನ್ಯಾಯಾಲಯದ ಮೆಟ್ಟಿಲು ತುಳಿಯಬಾರದು. ಕಾನೂನಿನ ಅರಿವಿದ್ದಾಗ ಈ ರೀತಿಯ ಘಟನೆಗಳು ನಡೆಯುವುದಿಲ್ಲ ಎಂದರು.

ತಾ.ಪಂ. ಇಒ ಚಂದ್ರು ಮಾತನಾಡಿ, ಕಾನೂನಿನ ಅರಿವು ಇಲ್ಲದಿದ್ದಾಗ ಅಪರಾಧ ಪ್ರಕರಣಗಳು ಹೆಚ್ಚಾಗಿ ನಡೆಯುತ್ತವೆ. ಕಾನೂನನ್ನು ತಿಳಿದುಕೊಂಡರೆ ಅಪರಾಧಕ್ಕೆ ಕಡಿವಾಣ ಹಾಕಬಹುದು. ಪ್ರತಿಯೊಬ್ಬರೂ ಕಾನೂನಿನ ಅರಿವು ಪಡೆದುಕೊಳ್ಳಬೇಕು ಎಂದು ಕಿವಿಮಾತು
ಹೇಳಿದರು.

ತಾಲ್ಲೂಕು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ದಿಲೀಪ್ ಕುಮಾರ್, ಸ್ಥಳೀಯ ಮುಖಂಡರು ಭಾಗವಹಿಸಿದ್ದರು. ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಶಿಶು ಅಭಿವೃದ್ಧಿ ಯೋಜನಾ ಇಲಾಖೆ, ಅರಣ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ, ನಗರಸಭೆ ಹಾಗೂ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT