ರಾಮನಗರ: ನಮ್ಮವರು ಬಳಗದ ವತಿಯಿಂದ ನಾಡೋಜ ಪ್ರೊ. ಬರಗೂರು ರಾಮಚಂದ್ರಪ್ಪ ಅವರ ‘ಸೌಹಾರ್ದ ಭಾರತ’ ಕೃತಿಯ ಜನಾರ್ಪಣೆ ಬಿಡುಗಡೆ ಕಾರ್ಯಕ್ರಮವನ್ನು ನಗರದ ಎಂ.ಎಚ್. ಕಾಲೇಜು ಸಭಾಂಗಣದಲ್ಲಿ ಜ. 10ರಂದು ಬೆಳಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ. ಜನ ಪ್ರಕಾಶನ ಪ್ರಕಟಿಸಿರುವ ಈ ಪುಸ್ತಕದ ಜನಾರ್ಪಣೆ ಕಾರ್ಯಕ್ರಮವು ರಾಜ್ಯದಾದ್ಯಂತ ಏಕಕಾಲಕ್ಕೆ ನಡೆಯಲಿದೆ.

ನಗರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಮನಗರದ ಆದಿಚುಂಚನಗಿರಿ ಶಾಖಾ ಮಠದ ಅನ್ನದಾನೇಶ್ವರನಾಥ ಸ್ವಾಮೀಜಿ, ರಾಮನಗರ-ಚನ್ನಪಟ್ಟಣದ ಕ್ರೈಸ್ತ ಸಭಾ ಪಾಲಕರಾದ ಘನ ಸ್ಯಾಮ್ಸನ್, ಪಿರಾನ್ಷಾ ವಲಿ ದರ್ಗಾದ ಶಹಬಾಜ್ ಅಲಿ ಷಾ ಚಿಸ್ತಿ ಹಾಗೂ ಬೆಂಗಳೂರಿನ ಸದಾಶಿವನಗರದ ನಾಗಸೇನ ಬುದ್ಧ ವಿಹಾರದ ಭಂತೆ ಬೋಧಿದತ್ತ ಥೇರೊ ಪುಸ್ತಕ ಜನಾರ್ಪಣೆ ಮಾಡಿ ಸೌಹಾರ್ದ ಸಂದೇಶ ನೀಡಲಿದ್ದಾರೆ.

ಪುಸ್ತಕ ಕುರಿತು ಸಾಹಿತಿ ಹಾಗೂ ಪ್ರಗತಿಪರ ಚಿಂತಕಿ ಕೆ. ಷರೀಫಾ ಮಾತನ್ನಾಡಲಿದ್ದಾರೆ. ರಾಮನಗರ ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ಶಶಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.