ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕ್ರೀಡಾ ಚಟುವಟಿಕೆ ಪಾಠದಷ್ಠೆ ಮುಖ್ಯ’

Last Updated 17 ಮಾರ್ಚ್ 2019, 14:21 IST
ಅಕ್ಷರ ಗಾತ್ರ

ರಾಮನಗರ: ವಿದ್ಯಾರ್ಥಿಗಳಿಗೆ ಶಿಕ್ಷಣದಷ್ಟೇ ಕ್ರೀಡಾ ಚಟುವಟಿಕೆಗಳು ಮುಖ್ಯ. ಬೆಳೆಯುವ ಮಕ್ಕಳ ಆರೋಗ್ಯಕ್ಕೆ ಕ್ರೀಡೆ ಪೂರಕ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಎಸ್.ಹೊನ್ನಸ್ವಾಮಿ ಹೇಳಿದರು.

ಇಲ್ಲಿನ ಬ್ಲಾಸಂ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಶನಿವಾರ ನಡೆದ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕ್ರೀಡಾ ಚಟುವಟಿಕೆಗಳು ಸಮಗ್ರ ಶಿಕ್ಷಣದ ಭಾಗ. ಕ್ರೀಡೆಯಿಂದ ಆರೋಗ್ಯ ಸುಧಾರಿಸುತ್ತದೆ. ಓದಿನಲ್ಲಿ ಆಸಕ್ತಿ ಮೂಡಿಸಲು ಕ್ರೀಡಾ ಚಟುವಟಿಕೆಗಳು ಸಹಕಾರಿ ಎಂದು ತಿಳಿಸಿದರು.

ಉತ್ತಮ ಕಲಿಕೆಗೆ ಮಕ್ಕಳು ಆರೋಗ್ಯವಂತರಾಗಿರಬೇಕು. ವಿದ್ಯಾರ್ಥಿಗಳು ಓದಿಗಷ್ಟೇ ಸೀಮಿತವಾದರೆ ಮಾನಸಿಕ ಒತ್ತಡ ಹೆಚ್ಚುತ್ತದೆ. ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಒತ್ತಡ ನಿವಾರಣೆಯಾಗುತ್ತದೆ. ಕ್ರೀಡೆಗಳಿಂದ ಸ್ಪರ್ಧಾ ಮನೋಭಾವ ಮೂಡುತ್ತದೆ. ಆದ್ದರಿಂದ ಶಿಕ್ಷಕರು ಮಕ್ಕಳಲ್ಲಿ ಕ್ರೀಡಾಸಕ್ತಿ ಬೆಳೆಸಬೇಕು ಎಂದು ಅವರು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಪೋಷಕರು ಮಕ್ಕಳನ್ನು ಓದಿಗಷ್ಟೇ ಸೀಮಿತಗೊಳಿಸುತ್ತಿದ್ದಾರೆ. ಮಕ್ಕಳು ಹೆಚ್ಚು ಅಂಕ ಗಳಿಸಿದರೆ ಸಾಕು ಎಂಬ ಮನೋಭಾವದಿಂದ ವಿವಿಧ ಕ್ರೀಡೆಗಳು ಕಣ್ಮರೆಯಾಗುತ್ತಿವೆ. ಮಕ್ಕಳು ಕ್ರೀಡೆಗಳಲ್ಲಿ ಪಾಲ್ಗೊಳ್ಳಲು ಪೋಷಕರು ಪ್ರೋತ್ಸಾಹಿಸಬೇಕು. ಕ್ರೀಡೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಭಾಗವಹಿಸುವಿಕೆ ಮುಖ್ಯ. ಸೋತವರು ಹತಾಶರಾಗದೆ ಪ್ರಯತ್ನ ಮುಂದುವರಿಸಿದರೆ ಭವಿಷ್ಯದಲ್ಲಿ ಗೆಲುವು ಸಾಧಿಸುವುದು ಖಚಿತ ಎಂದು ತಿಳಿಸಿದರು.

ಶಾಲೆಯ ಕಾರ್ಯದರ್ಶಿ ಸುನೀಲ್ ಮಾತನಾಡಿ, ಮಕ್ಕಳು ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ಅವರ ದೈಹಿಕ ಮತ್ತು ಮಾನಸಿಕ ಆರೋಗ್ಯ ಉತ್ತಮ ವಾಗಿರುತ್ತದೆ. ಮೊಬೈಲ್ ವ್ಯಾಮೋಹ ಬಿಟ್ಟು ಓದಿನ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ಶಾಲೆಯ ಪ್ರಾಚಾರ್ಯೆ ಸಹನಾ ಸುನೀಲ್, ಟ್ರಸ್ಟಿ ಸುಶೀಲಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT