ಕನಕಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಬೆಂಗಳೂರು ವಿಭಾಗ ಮಟ್ಟದ 17 ವರ್ಷದೊಳಗಿನ ಬಾಲಕಿಯರ ಥ್ರೋಬಾಲ್ ಪಂದ್ಯಾವಳಿಯಲ್ಲಿ ಕನಕಪುರ ತಾಲೂಕಿನ ಐ. ಗೊಲ್ಲಹಳ್ಳಿಯ ಗ್ರಾಮದ ಸ್ವರಾಜ್ಯ ಪ್ರೌಢಶಾಲೆ ಹಾಗೂ ಚನ್ನಪಟ್ಟಣ ತಾಲ್ಲೂಕಿನ ಹೊನ್ನನಾಯಕನಹಳ್ಳಿಯ ಕಿತ್ತೂರು ರಾಣಿ ಚೆನ್ನಮ್ಮ ಶಾಲೆ ವಿದ್ಯಾರ್ಥಿನಿಯರನ್ನು ಒಳಗೊಂಡ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.

ವಿದ್ಯಾರ್ಥಿನಿಯರಾದ ಮೇಘನಾ ಜಿ.ಕೆ, ಮಾನ್ಯ ಬಿ., ಸುರಭಿ ಎಸ್., ರಕ್ಷಿತಾ ಬಿ.ಎಸ್., ಚಿತ್ರಾಶ್ರೀ, ಪುಣ್ಯಶ್ರೀ, ತೇಜಸ್ವಿನಿ ಟಿ.ಎಸ್ ., ಅನನ್ಯ ಟಿ.ಪಿ., ಸ್ಪಂದನ, ಭವಾನಿ ಡಿ.ಎಂ., ಐಶ್ವರ್ಯ, ತ್ರಿಷಾ ಅವರನ್ನೊಳಗೊಂಡ ತಂಡ ಅಂತಿಮ ಪಂದ್ಯದಲ್ಲಿ ತೋರಿದ ಅತ್ಯುತ್ತಮ ಪ್ರದರ್ಶನ ತೋರಿ ಪ್ರಥಮ ಸ್ಥಾನ ಪಡೆದು ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು.

ವಿಜೇತ ತಂಡಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಡಿಡಿಪಿಐ ಬೈಲಾಂಜನಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಹನುಮನಾಯಕರ್, ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕ ಡಾ. ರಮೇಶ್ ಸೇರಿದಂತೆ ಗಣ್ಯರು ಟ್ರೋಫಿ ಹಾಗೂ ಪ್ರಮಾಣಪತ್ರಗಳನ್ನು ವಿತರಿಸಿದರು. ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾರ್ಯದರ್ಶಿ ಪುಟ್ಟಸ್ವಾಮಿ ಹಾಗೂ ಇತರರು ಇದ್ದರು.

ತಂಡಕ್ಕೆ ಗ್ರಾಮ ಸ್ವರಾಜ್ಯ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಚಂದ್ರಶೇಖರ್ ಮತ್ತು ಪವಿತ್ರಾ ತರಬೇತಿ ನೀಡಿದ್ದರು. ವಿದ್ಯಾರ್ಥಿನಿಯರ ಸಾಧನೆಗೆ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಸುಂದರಗೌಡ, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸತೀಶ, ಶ್ರೀ ಶಂಭುಲಿಂಗೇಶ್ವರ ವಿದ್ಯಾ ಸಂಸ್ಥೆಯ ಅಧ್ಯಕ್ಷರು, ಪದಾಧಿಕಾರಿಗಳು, ಸ್ವರಾಜ್ಯ ಪ್ರೌಢಶಾಲೆ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ಶಾಲೆ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.