ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸುಗಮ

ಮೊದಲ ದಿನ ಒಟ್ಟು 350 ವಿದ್ಯಾರ್ಥಿಗಳು ಗೈರು
Last Updated 21 ಮಾರ್ಚ್ 2019, 14:07 IST
ಅಕ್ಷರ ಗಾತ್ರ

ರಾಮನಗರ: ಜಿಲ್ಲೆಯಲ್ಲಿ ಗುರುವಾರ ಎಸ್ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಿದ್ದು, ಮೊದಲ ದಿನ ನಡೆದ ಪ್ರಥಮ ಭಾಷೆ ಪರೀಕ್ಷೆಗೆ 350 ವಿದ್ಯಾರ್ಥಿಗಳು ಗೈರಾದರು.

ಜಿಲ್ಲೆಯಲ್ಲಿ ಒಟ್ಟು 12,558 ವಿದ್ಯಾರ್ಥಿಗಳು ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ತೆಗೆದುಕೊಂಡಿದ್ದಾರೆ. ಇವರಲ್ಲಿ 240 ಬಾಲಕರು ಹಾಗೂ 110 ಬಾಲಕಿಯರು ಗುರುವಾರ ಪರೀಕ್ಷೆಗೆ ಗೈರಾದರು ಎಂದು ಡಿಡಿಪಿಐ ಗಂಗಮಾರೇಗೌಡ ತಿಳಿಸಿದರು.

ಬೆಳಿಗ್ಗೆ 9.30ರಿಂದ ಮಧ್ಯಾಹ್ನ 12.30ರವರೆಗೆ ಪರೀಕ್ಷೆಗಳು ನಡೆದವು. ಒಟ್ಟು 56 ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಸಾಕಷ್ಟು ಮುಂಚೆಯೇ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳತ್ತ ಹೆಜ್ಜೆ ಹಾಕಿದ್ದರು. ಜೊತೆಗೆ ಅವರ ಪೋಷಕರೂ ಬಂದಿದ್ದು, ಮಕ್ಕಳಲ್ಲಿ ಧೈರ್ಯ ತುಂಬುವ ಕೆಲಸ ಮಾಡಿದರು.

ಪರೀಕ್ಷೆ ಸುಗಮವಾಗಿ ನಡೆಯಲು ಸಾರ್ವಜನಿಕ ಶಿಕ್ಷಣ ಇಲಾಖೆಯು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿತ್ತು. ಎಲ್ಲ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲಿನಲ್ಲಿ ಪ್ರಶ್ನೆಪತ್ರಿಕೆಗಳನ್ನು ತೆರೆಯಲಾಯಿತು. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಜಾಗೃತ ದಳಗಳು ಅಲ್ಲಲ್ಲಿ ಸಂಚರಿಸುತ್ತಾ ಪರೀಕ್ಷಾ ಚಟುವಟಿಕೆಗಳ ಮೇಲೆ ನಿಗಾ ವಹಿಸಿದವು.

ಪರೀಕ್ಷೆಯ ವೇಳೆಯಲ್ಲಿ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಲಾಗಿತ್ತು. ಪೊಲೀಸ್‌ ಭದ್ರತೆಯನ್ನೂ ಕಲ್ಪಿಸಲಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಪ್ರತಿ ಕೇಂದ್ರಕ್ಕೆ ಶುಶ್ರೂಷಕಿಯರ ಸೇವೆಯನ್ನು ಒದಗಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT